ADVERTISEMENT

ಕೃಷಿ ಕಾಯ್ದೆ ವಾಪಸ್ ಪಡೆಯಲು ಆಗ್ರಹ- ರೈತ ಸಂಘದಿಂದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 6 ಜೂನ್ 2021, 1:57 IST
Last Updated 6 ಜೂನ್ 2021, 1:57 IST
ರಾಜ್ಯ ರೈತ ಸಂಘದಿಂದ ಹಿರೇಕೆರೂರಿನ ಬಿಜೆಪಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು
ರಾಜ್ಯ ರೈತ ಸಂಘದಿಂದ ಹಿರೇಕೆರೂರಿನ ಬಿಜೆಪಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು   

ಹಿರೇಕೆರೂರು: ರೈತರಿಗೆ ಮಾರಕವಾದ ಕೃಷಿ ಕಾಯ್ದೆಗಳನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರ ಹಿಂಪಡೆಯಬೇಕು ಎಂದು ಒತ್ತಾಯಿಸಿ ರಾಜ್ಯ ರೈತ ಸಂಘದ ಹಿರೇಕೆರೂರ-ರಟ್ಟೀಹಳ್ಳಿ ತಾಲ್ಲೂಕು ಘಟಕಗಳಿಂದ ಶನಿವಾರ ಪಟ್ಟಣದ ಬಿಜೆಪಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಕೃಷಿ ಕಾಯ್ದೆಗಳ ಪ್ರತಿಗಳನ್ನು ಸುಡುವ ಮೂಲಕ ರೈತರು ಆಕ್ರೋಶ ವ್ಯಕ್ತಪಡಿಸಿದರು.

ನೇತೃತ್ವ ವಹಿಸಿದ್ದ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಮಣ್ಣ ಕೆಂಚಳ್ಳೇರ, ರೈತರಿಗೆ ಮಾರಕವಾಗಿರುವ ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕು. ದೆಹಲಿ ಗಡಿಯಲ್ಲಿ ಅಖಿಲ ಭಾರತ ಕಿಸಾನ್ ಯೂನಿಯನ್ ರೈತ ಒಕ್ಕೂಟದ ಕಾರ್ಯಕರ್ತರು ಪ್ರಾಣದ ಹಂಗು ತೊರೆದು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಕೇಂದ್ರ ಸರ್ಕಾರ ಚಳವಳಿಗಾರರನ್ನು ನಿರ್ಲಕ್ಷ ಮಾಡಿ, ದುರಹಂಕಾರದಿಂದ ವರ್ತಿಸುತ್ತಿದೆ ಎಂದರು.

ವಿದ್ಯುತ್ ವಿತರಣೆಯನ್ನು ಖಾಸಗಿಯವರಿಗೆ ಕೊಡುವ ಹುನ್ನಾರ ನಡೆಸಲಾಗಿದೆ. ಇದರಿಂದ ರೈತರು ನೀರಾವರಿ ಮಾಡುವುದನ್ನು ಬಿಡಬೇಕಾಗುತ್ತದೆ. ದೇಶದ ಆಹಾರ ಭದ್ರತೆಗೆ ಧಕ್ಕೆ ಉಂಟುಮಾಡುವ ವಿದ್ಯುತ್ ಖಾಸಗೀಕರಣದ ಪ್ರಯತ್ನ ಕೈಬೀಡಬೇಕು ಎಂದರು.

ADVERTISEMENT

ರೈತ ಮುಖಂಡರಾದ ಬಸನಗೌಡ ಗಂಗಪ್ಪನವರ, ಪ್ರಭುಗೌಡ ಪ್ಯಾಟಿ, ಶಂಕರಗೌಡ ಶಿರಗಂಬಿ, ಗಂಗನಗೌಡ ಮುದಿಗೌಡ್ರ, ಶಂಭು ಮುತ್ತಗಿ, ಶಂಕ್ರಪ್ಪ ಮಕ್ಕಳ್ಳಿ, ಹನುಮಂತಪ್ಪ ಜೋಗೇರ, ನಾಗರಾಜ ದೊಡ್ಡಬಸಪ್ಪಳವರ, ಚಂದ್ರಪ್ಪ ಅಂಗಡಿ, ಬಸವರಾಜ ಗುಬ್ಬಿ, ರಾಜು ಕೆಳಗಿನಮನಿ, ಕರೇಗೌಡ ದೇವರಬಸಪ್ಪನವರ, ತಿರುಕಪ್ಪ ದೊಡ್ಡಬಸಪ್ಪಳವರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.