ADVERTISEMENT

ನವಜಾತ ಶಿಶುವಿನ ಮೃತದೇಹ ಪತ್ತೆ

​ಪ್ರಜಾವಾಣಿ ವಾರ್ತೆ
Published 10 ನವೆಂಬರ್ 2020, 14:44 IST
Last Updated 10 ನವೆಂಬರ್ 2020, 14:44 IST
ಸವಣೂರ ತಾಲ್ಲೂಕಿನ ಇಸ್ಲಾಂಪೂರ ಗ್ರಾಮದ ಹತ್ತಿರದ ಸಣ್ಣಕೆರೆಯಲ್ಲಿ(ಹೊಂಡ) ಮಂಗಳವಾರ ನವಜಾತ ಹೆಣ್ಣು ಶಿಶುವಿನ ಮೃತದೇಹ ಪತ್ತೆಯಾದ ಸ್ಥಳಕ್ಕೆ ಸಿಡಿಪಿಒ ಅಣ್ಣಪ್ಪ ಹೆಗಡೆ, ಪಿಎಸ್ಐ ಹನುಮಂತಪ್ಪ ಶಿವಣ್ಣವರ, ಪುರಸಭೆ, ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಿಬ್ಬಂದಿ ಭೆಟ್ಟಿ ನೀಡಿ ಪರಿಶೀಲನೆ ಕೈಗೊಂಡರು.

ಸವಣೂರ: ತಾಲ್ಲೂಕಿನ ಇಸ್ಲಾಂಪೂರ ಗ್ರಾಮದ ಹತ್ತಿರದ ಸಣ್ಣ ಕೆರೆಯಲ್ಲಿ ಮಂಗಳವಾರ ಬೆಳಿಗ್ಗೆ ನವಜಾತ ಹೆಣ್ಣು ಶಿಶುವಿನ ಮೃತದೇಹ ಪತ್ತೆಯಾಗಿದೆ.

ಶಿಶುವಿನ ಮೃತದೇಹ ನೀರಿನಲ್ಲಿ ತೆಲುತ್ತಿದ್ದನ್ನು ಕಂಡು ದಾರಿಹೋಕರು ಪೋಲಿಸರಿಗೆ ವಿಷಯ ತಿಳಿಸಿದ್ದಾರೆ. ಸಿಡಿಪಿಒ ಅಣ್ಣಪ್ಪ ಹೆಗಡೆ ಹಾಗೂ ಪೊಲೀಸರು ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸಿದರು. ಪೌರಕಾರ್ಮಿಕರ ಸಹಕಾರದಿಂದ ಮೃತದೇಹ ಹೊರ ತೆಗೆದು ಮರಣೋತ್ತರ ಪರೀಕ್ಷೆಗಾಗಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಿದರು.

‘ಹೆಣ್ಣು ಶಿಶುವಿನ ಮೃತದೇಹ ಕೊಳೆತ ನಾರುತ್ತಿತ್ತು. ಮರಣೋತ್ತರ ಪರೀಕ್ಷೆ ನಂತರ ಹೆಚ್ಚಿನ ಮಾಹಿತಿ ತಿಳಿಯಲು ಸಾಧ್ಯವಾಗಲಿದೆ. ತಕ್ಷಣವೇ ಪಾಲಕರ ಕುರಿತು ಮಾಹಿತಿ ಕಲೆಹಾಕಲು ಅಂಗನವಾಡಿ ಕಾರ್ಯಕರ್ತರಿಗೆ ಸೂಚನೆ ನೀಡಲಾಗಿದೆ ಹಾಗೂ ಪಟ್ಟಣದ ಪೋಲಿಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಿಸಲಾಗಿದೆ. ಶಿಶುವಿನ ಪಾಲಕರ ಪತ್ತೆ ಕಾರ್ಯ ಮುಂದುವರೆದಿದೆ’ ಎಂದು ಸಿಡಿಪಿಒ ಅಣ್ಣಪ್ಪ ಹೆಗಡೆ ತಿಳಿಸಿದರು.

ADVERTISEMENT

ಸಿಪಿಐ ಶಶಿಧರ ಜಿ.ಎಂ., ಪಿಎಸ್ಐ ಹನುಮಂತಪ್ಪ ಶಿವಣ್ಣವರ, ಪುರಸಭೆ, ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.