ADVERTISEMENT

ದೇವರಗುಡ್ಡ: ವಿಶೇಷ ಪೂಜೆ ಮಾಡಿದ ಸಿ.ಎಂ

ಆಶೀರ್ವಾದ ಸಿಕ್ಕಿದೆ–ಕಂಟಕ ನಿವಾರಣೆ ನಿಶ್ಚಿತ: ಎಚ್.ಕೆ.ಪಾಟೀಲ

​ಪ್ರಜಾವಾಣಿ ವಾರ್ತೆ
Published 30 ಆಗಸ್ಟ್ 2024, 17:59 IST
Last Updated 30 ಆಗಸ್ಟ್ 2024, 17:59 IST
<div class="paragraphs"><p>ಹಾವೇರಿ ಜಿಲ್ಲೆಯ ಸುಕ್ಷೇತ್ರ ದೇವರಗುಡ್ಡದ ಮಾಲತೇಶ ದೇವಸ್ಥಾನಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗರ್ಭಗುಡಿ ಪ್ರವೇಶಿಸಿ ದೇವರ ದರ್ಶನ ಪಡೆದು ಹೊರಬಂದರು</p></div>

ಹಾವೇರಿ ಜಿಲ್ಲೆಯ ಸುಕ್ಷೇತ್ರ ದೇವರಗುಡ್ಡದ ಮಾಲತೇಶ ದೇವಸ್ಥಾನಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗರ್ಭಗುಡಿ ಪ್ರವೇಶಿಸಿ ದೇವರ ದರ್ಶನ ಪಡೆದು ಹೊರಬಂದರು

   

ದೇವರಗುಡ್ಡ: ಇಲ್ಲಿಯ ಸುಕ್ಷೇತ್ರ ಮಾಲತೇಶ ದೇವಸ್ಥಾನಕ್ಕೆ ಶುಕ್ರವಾರ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶೇಷ ಪೂಜೆ ಸಲ್ಲಿಸಿದರು. ಅರ್ಚಕರು, ಪೂಜಾ ಕೈಂಕರ್ಯಗಳನ್ನು ಪೂರ್ಣಗೊಳಿಸಿದರು. ಬಳಿಕ, ಗಂಗಮಾಳಮ್ಮ ದೇವಸ್ಥಾನಕ್ಕೂ ಭೇಟಿ ನೀಡಿ ನಮಸ್ಕರಿಸಿದರು. ನಂತರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕಂಚಿನ ಪ್ರತಿಮೆ ಮತ್ತು ಕನಕ ಭವನ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಆಯೋಜಿಸಲಾಗಿದ್ದ ಸಮಾವೇಶದಲ್ಲಿ ಸಚಿವ ಎಚ್.ಕೆ.ಪಾಟೀಲ ಮಾತನಾಡಿ,‘ಜನರು ಮತ್ತು ಸ್ಥಳೀಯ ಶಾಸಕರ ಒತ್ತಾಯದಿಂದ ದೇವರಗುಡ್ಡಕ್ಕೆ ಬಂದಿದ್ದೇವೆ. ನನಗೂ ಮತ್ತು ಮುಖ್ಯಮಂತ್ರಿಯವರಿಗೆ ಮಾಲತೇಶ ದೇವರ ಆಶೀರ್ವಾದ ಸಿಕ್ಕಿದೆ’ ಎಂದರು.

ADVERTISEMENT

‘ಮುಖ್ಯಮಂತ್ರಿ ಅವರಿಗೆ ಕಂಟಕ ಬರಲಿ ಎನ್ನುವವರು ಈಗ ಹೆಚ್ಚಾಗಿದ್ದಾರೆ. ಮುಖ್ಯಮಂತ್ರಿಗೆ ಎದುರಾದ ಕಂಟಕವನ್ನು ನಿವಾರಿಸಲು ಸ್ಥಳೀಯ ಶಾಸಕರು, ಅವರನ್ನು ದೇವರಗುಡ್ಡದ ಮಾಲತೇಶ ದೇವರ ಸನ್ನಿಧಿಗೆ ಕರೆಸಿ ದೇವರಿಗೆ ವಿಶೇಷ ಪೂಜೆ ಮಾಡಿಸಿದ್ದಾರೆ’ ಎಂದರು.

ವಿಶೇಷ ಪೂಜೆ ಬಗ್ಗೆ ಪ್ರಸ್ತಾಪಿಸದ ಮುಖ್ಯಮಂತ್ರಿ ಸಿದ್ದರಾಮಯ್ಯ,‘ಊರಿನ ಜನರ ಪ್ರೀತಿ ಹಾಗೂ ಅಭಿಮಾನಕ್ಕೆ ನಾನು ಚಿರಋಣಿ. ಮಾಲತೇಶ ದೇವರು ನಿಮಗೆ, ನಾಡಿಗೆ ಹಾಗೂ ನನಗೆ ಒಳ್ಳೆಯದು ಮಾಡಲೆಂದು ಬಯಸುವೆ’ ಎಂದರು.

‘ಹಿಂದುಳಿದ ವರ್ಗದ ನಾನು ಎರಡನೇ ಬಾರಿ ಮುಖ್ಯಮಂತ್ರಿಯಾದೆ ಎಂಬ ಕಾರಣಕ್ಕೆ ಕೆಲವರಿಗೆ ಹೊಟ್ಟೆ ಉರಿ. ಅದಕ್ಕೆ ಅವರು ಷಡ್ಯಂತ್ರ ಮಾಡುತ್ತಿದ್ದಾರೆ’ ಎಂದರು.

‘ನಾನು ಅಸೂಯೆ ಮತ್ತು ದ್ವೇಷದ ರಾಜಕಾರಣ ಮಾಡುವುದಿಲ್ಲ. ಜನರ ಆಶೀರ್ವಾದ ಇರುವವರೆಗೂ ನನಗೆ ಏನು ಆಗುವುದಿಲ್ಲ. ಯಾವುದಕ್ಕೂ ಹೆದರಲ್ಲ. ಯಾವುದೇ ಪಿತೂರಿ-ಷಡ್ಯಂತ್ರಕ್ಕೂ ಭಯಪಡುವವನಲ್ಲ’ ಎಂದರು.

ಹಾವೇರಿ ಜಿಲ್ಲೆಯ ಸುಕ್ಷೇತ್ರ ದೇವರಗುಡ್ಡದಲ್ಲಿ ನಿರ್ಮಿಸಲಾಗಿರುವ ಕನಕ ಭವನ ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕನಕದಾಸರ ಪ್ರತಿಮೆಗೆ ಪುಷ್ಪಗೌರವ ಸಲ್ಲಿಸಿದರು
ಹಾವೇರಿ ಜಿಲ್ಲೆಯ ಸುಕ್ಷೇತ್ರ ದೇವರಗುಡ್ಡದ ಮಾಲತೇಶ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳಾರತಿ ಪಡೆದರು

ಹಾವೇರಿ ಜಿಲ್ಲೆಯ ಸುಕ್ಷೇತ್ರ ದೇವರಗುಡ್ಡದ ಮಾಲತೇಶ ದೇವಸ್ಥಾನಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗರ್ಭಗುಡಿ ಪ್ರವೇಶಿಸಿ ದೇವರ ದರ್ಶನ ಪಡೆದು ಹೊರಬಂದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.