ADVERTISEMENT

ಹಾವೇರಿ| 400 ಮಹಿಳಾ ಪೌರಕಾರ್ಮಿಕರಿಗೆ ಸ್ಕೂಟಿ ವಿತರಣೆ

ಪೌರಕಾರ್ಮಿಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ- ಅರಿವು ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 26 ಮಾರ್ಚ್ 2023, 16:25 IST
Last Updated 26 ಮಾರ್ಚ್ 2023, 16:25 IST
ಹಾವೇರಿ ನಗರದ ಸಿದ್ಧರಾಮೇಶ್ವರ ಸಮುದಾಯ ಭವನದಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಪೌರಕಾರ್ಮಿಕರಿಗೆ ಚೆಕ್‌ ಮತ್ತು ಆದೇಶ ಪತ್ರವನ್ನು ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗ ಅಧ್ಯಕ್ಷ ಎಂ.ಶಿವಣ್ಣ ಕೋಟೆ ವಿತರಿಸಿದರು. ಲಿಡ್ಕರ್‌ ನಿಗಮದ ಉಪಾಧ್ಯಕ್ಷ ಡಿ.ಎಸ್.ಮಾಳಗಿ, ನಗರಸಭೆ ಅಧ್ಯಕ್ಷ ಸಂಜೀವಕುಮಾರ ನೀರಲಗಿ ಇದ್ದಾರೆ 
ಹಾವೇರಿ ನಗರದ ಸಿದ್ಧರಾಮೇಶ್ವರ ಸಮುದಾಯ ಭವನದಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಪೌರಕಾರ್ಮಿಕರಿಗೆ ಚೆಕ್‌ ಮತ್ತು ಆದೇಶ ಪತ್ರವನ್ನು ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗ ಅಧ್ಯಕ್ಷ ಎಂ.ಶಿವಣ್ಣ ಕೋಟೆ ವಿತರಿಸಿದರು. ಲಿಡ್ಕರ್‌ ನಿಗಮದ ಉಪಾಧ್ಯಕ್ಷ ಡಿ.ಎಸ್.ಮಾಳಗಿ, ನಗರಸಭೆ ಅಧ್ಯಕ್ಷ ಸಂಜೀವಕುಮಾರ ನೀರಲಗಿ ಇದ್ದಾರೆ    

ಹಾವೇರಿ: ‘ಮಹಾನಗರ ಪಾಲಿಕೆ ಮಹಿಳಾ ಪೌರಕಾರ್ಮಿಕರಿಗೆ ಎಲೆಕ್ಟ್ರಿಕಲ್ ಸ್ಕೂಟಿ ವಿತರಣೆ ಮಾಡಲಾಗುತ್ತಿದ್ದು, ಈಗಾಗಲೇ ಬೆಂಗಳೂರಿನಲ್ಲಿ 400 ಮಹಿಳಾ ಪೌರಕಾರ್ಮಿಕರಿಗೆ ಎಲೆಕ್ಟ್ರಿಕಲ್ ಸ್ಕೂಟಿ ವಿತರಣೆ ಮಾಡಲಾಗಿದೆ’ ಎಂದು ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗ ಅಧ್ಯಕ್ಷ ಎಂ.ಶಿವಣ್ಣ ಕೋಟೆ ಹೇಳಿದರು.

ಹಾವೇರಿ ನಗರದ ಸಿದ್ಧರಾಮೇಶ್ವರ ಸಮುದಾಯ ಭವನದಲ್ಲಿ ಭಾನುವಾರ ಪೌರಕಾರ್ಮಿಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಎಂ.ಎಸ್. ಕಾಯ್ದೆ 2013 ರನ್ವಯ ಸಫಾಯಿ ಕರ್ಮಚಾರಿಗಳಿಗೆ ಅರಿವು ಮೂಡಿಸುವ ಕಾರ್ಯಕ್ರಮ ಉದ್ಘಾಟಿಸಿ, ಅವರು ಮಾತನಾಡಿದರು. ಬರುವ ದಿನಗಳಲ್ಲಿ ಪೌರಕಾರ್ಮಿಕರು ಕಾರಿನಲ್ಲಿ ಓಡಾಡಲಿದ್ದಾರೆ ಎಂದರು.

ಪೌರಕಾರ್ಮಿಕರ ಸಾಮಾಜಿಕ, ಆರ್ಥಿಕ ಸ್ಥಿತಿಗತಿ ಅರ್ಥ ಮಾಡಿಕೊಂಡು ಮುಖ್ಯಮಂತ್ರಿಗೆ ಮೂರು ವರದಿ ನೀಡಿದ್ದೆ. ಅವುಗಳನ್ನು ಪರಿಶೀಲಿಸಿದ ಬೊಮ್ಮಾಯಿ ಅವರು ರಾಜ್ಯದ 11,113 ಪೌರಕಾರ್ಮಿಕರನ್ನು ಕಾಯಂಗೊಳಿಸುವ ತೀರ್ಮಾನ ಕೈಕೊಂಡಿದ್ದು ಇತಿಹಾಸ. ಪೌರಕಾರ್ಮಿಕರ ಮುಖಂಡರ ಸಭೆ ನಡೆಸಿದ ಸಿಎಂ ಅವರು ಮಹಿಳಾ ಪೌರಕಾರ್ಮಿಕರು ಬೆಳಿಗ್ಗೆ 6ರಿಂದ ಮಧ್ಯಾಹ್ನ 2 ಗಂಟೆವರೆಗೆ ಸ್ವಚ್ಛತಾ ಕಾರ್ಯದಲ್ಲಿ ತೊಡಗಿರುತ್ತಾರೆ. ಈ ಸಮಯದಲ್ಲಿ ಅವರ ವಿಶ್ರಾಂತಿಗೆ ವಿಶ್ರಾಂತಿ ಗೃಹ ಹಾಗೂ ಶೌಚಾಲಯ ನಿರ್ಮಾಣಕ್ಕೆ ರಾಜ್ಯದಲ್ಲಿ ಸೂಚನೆ ನೀಡಿದ್ದಾರೆ ಎಂದರು.

ADVERTISEMENT

ಪೌರಕಾರ್ಮಿಕರು ಆರ್ಥಿಕವಾಗಿ, ಸಾಮಾಜಿಕವಾಗಿ ಸದೃಢರಾಗಬೇಕು ಎಂಬ ಉದ್ದೇಶದಿಂದ ಸರ್ಕಾರ ಅನೇಕ ಸೌಲಭ್ಯಗಳನ್ನು ಜಾರಿಗೊಳಿಸಿದೆ. ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಬೇಕು ಹಾಗೂ ಮಕ್ಕಳಿಗೆ ಉತ್ತಮ ವಿದ್ಯಾಬ್ಯಾಸ ಕೊಡಿಸುವ ಮೂಲಕ ಉನ್ನತ ಹುದ್ದೆಯ ಅಧಿಕಾರಿಗಳನ್ನಾಗಿ ಮಾಡಬೇಕು ಎಂದು ಹೇಳಿದರು.

ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಲೋಡರ್ಸ್, ಹೆಲ್ಪರ್ಸ್ ಹಾಗೂ ವಾಹನ ಚಾಲಕರ ವೇತನ ನೇರ ಪಾವತಿಗೆ ಸರ್ಕಾರಕ್ಕೆ ಆಯೋಗದಿಂದ ಮನವಿ ಮಾಡಿಕೊಳ್ಳಲಾಗಿದೆ. ಗ್ರಾಮ ಪಂಚಾಯಿತಿ, ಆಸ್ಪತ್ರೆ, ಕಾರ್ಖಾನೆ ಸೇರಿದಂತೆ ಇತರೆ ಸ್ಥಳಗಳಲ್ಲಿ ಕಾರ್ಯನಿರ್ವಹಿಸುವ ಪೌರಕಾರ್ಮಿಕರನ್ನು ಗುರುತಿಸುವ ಕೆಲಸವಾಗಬೇಕಾಗಿದೆ. ಮ್ಯಾನ್‍ಹೋಲ್‍ಗಳಲ್ಲಿ ಇಳಿದು ಕೆಲಸಮಾಡುವುದನ್ನು ನಿಷೇಧಿಸಿದ್ದರೂ ಸಹ ಈಗಲೂ ಅಂತಹ ಪ್ರಕರಣಗಳು ನಡೆಯುತ್ತಿರುವುದು ವಿಷಾಧನೀಯ ಸಂಗತಿಯಾಗಿದೆ ಎಂದರು.

ಡಾ.ಬಾಬು ಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಡಿ.ಎಸ್.ಮಾಳಗಿ ಹಾಗೂ ನಗರಸಭೆ ಅಧ್ಯಕ್ಷ ಸಂಜೀವಕುಮಾರ ನೀರಲಗಿ ಮಾತನಾಡಿದರು.

ಆರೋಗ್ಯ ಇಲಾಖೆಯ ಅಧಿಕಾರಿ ಡಾ.ಸರಿತಾ ಅವರು ಉಪನ್ಯಾಸ ನೀಡಿದರು. ಜಿಲ್ಲಾ ಕಾರ್ಮಿಕ ಅಧಿಕಾರಿ ಮಹೇಶ ಮಳಲಿ ಅವರು ಕಾರ್ಮಿಕರ ಕಾಯ್ದೆ ಕುರಿತು ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ಜಿ.ಪಂ.ಉಪ ಕಾರ್ಯದರ್ಶಿ ಎಸ್.ಜಿ.ಮುಳ್ಳಳ್ಳಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಕೌಸರ್ ರೇಷ್ಮಾ, ಜಿಲ್ಲಾ ಜಾಗೃತಿ ಸಮಿತಿ ಸದಸ್ಯರಾದ ಉಡಚಪ್ಪ ಮಾಳಗಿ, ಸುಭಾಸ ಬೆಂಗಳೂರು, ಉಪ ವಿಭಾಗದ ಜಾಗೃತಿ ಸಮಿತಿ ಸದಸ್ಯೆ ಬಾಬಕ್ಕ ಬಳ್ಳಾರಿ, ಶಂಭು ಕಳಸದ, ಸಂಜಯಗಾಂಧಿ ಸಂಜೀವಣ್ಣನವರ, ನಿಂಗಪ್ಪ ಕಾಳೆ, ಪರಮೇಶಪ್ಪ ಮೇಗಳಮನಿ, ಹೊನ್ನಪ್ಪ ತಗಡಿನಮನಿ, ಫಕ್ಕಿರಮ್ಮ ಚಲವಾದಿ, ಮಲ್ಲಮ್ಮ ಪಾಟೀಲ ಇದ್ದರು.

ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಗೀತಾ ಸಿ.ಡಿ ಸ್ವಾಗತಿಸಿದರು. ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕಿ ಮಾಲತಿ ಬೆಟಸೂರ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.