ADVERTISEMENT

ಆಶ್ರಮ ವಸತಿ ಶಾಲೆಗಳಿಗೆ ಅರ್ಜಿ ಅಹ್ವಾನ

​ಪ್ರಜಾವಾಣಿ ವಾರ್ತೆ
Published 18 ಮೇ 2025, 16:22 IST
Last Updated 18 ಮೇ 2025, 16:22 IST

ಶಿಗ್ಗಾವಿ: ಸಮಾಜ ಕಲ್ಯಾಣ ಇಲಾಖೆಯಿಂದ ನಡೆಯುತ್ತಿರುವ ತಾಲ್ಲೂಕಿನ ಆಶ್ರಮ ವಸತಿ ಶಾಲೆಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ವರ್ಗದ ವಿದ್ಯಾರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿದೇರ್ಶಕಿ ಸರಸ್ವತಿ ಗಜಕೋಶ ತಿಳಿಸಿದ್ದಾರೆ.

ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಭಾರತ ರತ್ನ ಡಾ.ಬಿ.ಆರ್. ಅಂಬೇಡ್ಕರ್ ವಸತಿ ಶಾಲೆ ಶಿಗ್ಗಾವಿದಲ್ಲಿ 1ರಿಂದ 5ನೇ ತರಗತಿಗಳಲ್ಲಿ ಖಾಲಿ ಇರುವ ಸ್ಥಾನಗಳಿಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ವರ್ಗದ ವಿದ್ಯಾರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ವಸತಿ ಶಾಲೆಯಲ್ಲಿ ಹಾಗೂ ಸಹಾಯಕ ನಿರ್ದೇಶಕರ ಕಾರ್ಯಾಲಯ ಶಿಗ್ಗಾವಿದಲ್ಲಿ ಅರ್ಜಿ ಪಡೆದು ಮೇ 28ರೊಳಗೆ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT