ADVERTISEMENT

ಕೇಂದ್ರ ಸರ್ಕಾರ ಮಾತು ಉಳಿಸಿಕೊಳ್ಳಲಿ: ಡಿ.ಕೆ. ಶಿವಕುಮಾರ್

​ಪ್ರಜಾವಾಣಿ ವಾರ್ತೆ
Published 8 ಜನವರಿ 2026, 8:16 IST
Last Updated 8 ಜನವರಿ 2026, 8:16 IST
<div class="paragraphs"><p>ಡಿಕೆಶಿ </p></div>

ಡಿಕೆಶಿ

   

ಹಾವೇರಿ: ‘ರಾಜ್ಯದಲ್ಲಿರುವ ನೀರಾವರಿ ಯೋಜನೆಗೆ ಹಣ ನೀಡುವುದಾಗಿ ಹೇಳಿದ್ದ ಕೇಂದ್ರ ಸರ್ಕಾರ, ಈವರೆಗೆ ಕೊಟ್ಟಿಲ್ಲ’ ಎಂದು  ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆರೋಪಿಸಿದರು.

ನಗರದಲ್ಲಿ ಬುಧವಾರ ನಡೆದ ಹಾವೇರಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಹಿಮ್ಸ್) ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ನಾನು ಕೆಲ ದಿನಗಳ ಹಿಂದೆಯಷ್ಟೇ ಒಂದು ಪೋಸ್ಟ್ ಹಾಕಿದ್ದೆ. ಜಗತ್ತಿನ ಅತಿ ದೊಡ್ಡ ಶಕ್ತಿ ಎಂದರೆ ಕೊಟ್ಟ ಮಾತನ್ನು ಉಳಿಸಿಕೊಳ್ಳುವುದು. ಹೀಗಾಗಿ, ಕೇಂದ್ರ ಸರ್ಕಾರ ತನ್ನ ಮಾತು ಉಳಿಸಿಕೊಳ್ಳಬೇಕು’ ಎಂದರು.

ADVERTISEMENT

‘ರೈತರ ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಬೇಡ. ಎರಡು ವರ್ಷ ಮುಗಿದ ಮೇಲೆ ಬೇಕಾದರೆ, ರಾಜಕೀಯ ಮಾಡೋಣ. ಈಗ ಜನರ ಬದುಕಿನ ಬಗ್ಗೆ ಚಿಂತೆ ಮಾಡೋಣ. ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಅವರೇ ₹2 ಸಾವಿರ ಕೋಟಿ ಕೊಡುವುದಾಗಿ ಹೇಳಿ, ಈಗ ಮೌನವಾಗಿದ್ದಾರೆ. ಅವರು ಮಾತು ಕೊಟ್ಟಿದ್ದಾರೆ. ಅದನ್ನು ಉಳಿಸಿಕೊಳ್ಳಬೇಕು. ನಾವೆಲ್ಲ ರಾಜಕಾರಣದಲ್ಲಿ ಎಷ್ಟು ದಿನ ಇರುತ್ತೇವೆಯೋ ಗೊತ್ತಿಲ್ಲ. ಅಧಿಕಾರವೂ ಶಾಶ್ವತವಲ್ಲ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.