ADVERTISEMENT

ಮನಸ್ಸು ಕಟ್ಟುವ ಕೆಲಸ ಮಾಡಬೇಕೇ ವಿನಾ ಒಡೆಯುವ ಕೆಲಸ ಮಾಡಬಾರದು: ಡಿ.ಆರ್.ಪಾಟೀಲ

​ಪ್ರಜಾವಾಣಿ ವಾರ್ತೆ
Published 1 ಜೂನ್ 2020, 13:39 IST
Last Updated 1 ಜೂನ್ 2020, 13:39 IST
ಹಾವೇರಿಯಲ್ಲಿ ಜಿಲ್ಲಾ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ ಹಾಗೂ ನಗರಸಭೆ ವಾರ್ಡಗಳ ಸದಸ್ಯರ ಜಿಲ್ಲಾಮಟ್ಟದ ಸಭೆಯಲ್ಲಿ ಹಿರಿಯ ಮುಖಂಡ ಡಿ.ಆರ್.ಪಾಟೀಲ ಮಾತನಾಡಿದರು
ಹಾವೇರಿಯಲ್ಲಿ ಜಿಲ್ಲಾ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ ಹಾಗೂ ನಗರಸಭೆ ವಾರ್ಡಗಳ ಸದಸ್ಯರ ಜಿಲ್ಲಾಮಟ್ಟದ ಸಭೆಯಲ್ಲಿ ಹಿರಿಯ ಮುಖಂಡ ಡಿ.ಆರ್.ಪಾಟೀಲ ಮಾತನಾಡಿದರು   

ಹಾವೇರಿ: ಎಲ್ಲ ರಾಜಕೀಯ ಪಕ್ಷಗಳಲ್ಲಿರುವಂತೆ ಕಾಂಗ್ರೆಸ್ ಪಕ್ಷದಲ್ಲೂ ಸಹ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಇರಬಹುದು. ಆದರೂ ಪ್ರಸ್ತುತ ಸಂದರ್ಭದಲ್ಲಿ ಯಾರೂ ಗುಂಪುಗಾರಿಕೆ ಮಾಡಬಾರದು. ಕಾಂಗ್ರೆಸ್ ಕಾರ್ಯಕರ್ತರು ಯಾವಾಗಲೂ ಮನಸ್ಸು ಕಟ್ಟುವ ಕೆಲಸ ಮಾಡಬೇಕೇ ವಿನಾ ಮನಸ್ಸು ಒಡೆಯುವ ಕೆಲಸ ಮಾಡಬಾರದು ಎಂದು ಹಿರಿಯ ಮುಖಂಡ ಡಿ.ಆರ್.ಪಾಟೀಲ ಮನವಿ ಮಾಡಿದರು.

ಹಾವೇರಿಯ ಸಜ್ಜನರ ಸಭಾಂಗಣದಲ್ಲಿ ಜಿಲ್ಲಾ ಪಂಚಾಯ್ತಿ , ತಾಲ್ಲೂಕು ಪಂಚಾಯ್ತಿ ಹಾಗೂ ನಗರಸಭೆ ವಾರ್ಡಗಳ ಸದಸ್ಯರ ಜಿಲ್ಲಾಮಟ್ಟದ ಸಭೆಯಲ್ಲಿ ಅವರು ಮಾತನಾಡಿದರು. ಜೂನ್ 7ರಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರ ಅಧಿಕಾರ ಪದಗ್ರಹಣ ಸಮಾರಂಭವನ್ನು ಕಾಂಗ್ರೆಸ್ ಕಾರ್ಯಕರ್ತರು ಅದ್ಧೂರಿಯಾಗಿ ನಡೆಸಿಕೊಡಬೇಕೆಂದು ಸದಸ್ಯರಿಗೆ ಸಲಹೆ ನೀಡಿದರು.

ಜಿಲ್ಲಾ ಘಟಕದ ಅಧ್ಯಕ್ಷ ಎಂ.ಎಂ. ಹೀರೆಮಠ ಅವರ ಅಧ್ಯಕ್ಷತೆಯಲ್ಲಿ ಸಭೆ ಜರುಗಿತು. ಮಾಜಿ ಸಚಿವ ರುದ್ರಪ್ಪ ಲಮಾಣಿ, ಜಿ.ಪಂ.ಅಧ್ಯಕ್ಷ ಬಸನಗೌಡ ದೇಸಾಯಿ, ಎಸ್.ಆರ್. ಪಾಟೀಲ್, ಕೊಟ್ರೇಶಪ್ಪ ಬಸೇಗಣ್ಣಿ, ಎಸ್.ಎಫ್‌.ಎನ್. ಗಾಜಿಗೌಡ್ರ, ಡಾ.ಆರ್.ಎಂ.ಕುಬೇರಪ್ಪ, ಡಾ.ಸುರೇಶ ಯಲ್ಲಟ್ಟಿ ತಾಲ್ಲೂಕು ಘಟಕದ ಅಧ್ಯಕ್ಷ ಮೈದೂರು ಮುಂತಾದವರು ಭಾಗವಹಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.