ADVERTISEMENT

ಲೋಕಸಭೆ ಚುನಾವಣೆ: ಸಮರ್ಥ ಅಭ್ಯರ್ಥಿಗಳ ಕೊರತೆಯಿಲ್ಲ- ಪರಮೇಶ್ವರ್‌

ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2024, 21:26 IST
Last Updated 18 ಫೆಬ್ರುವರಿ 2024, 21:26 IST
ಡಾ.ಜಿ.ಪರಮೇಶ್ವರ್, ಗೃಹ ಸಚಿವ
ಡಾ.ಜಿ.ಪರಮೇಶ್ವರ್, ಗೃಹ ಸಚಿವ   

ಹಾವೇರಿ: ‘ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್ ಪಕ್ಷದಲ್ಲಿ ಬೇಕಾದಷ್ಟು ಜನ ಅಭ್ಯರ್ಥಿಗಳಿದ್ದಾರೆ. ನಮ್ಮಲ್ಲಿ ಸಮರ್ಥ ಅಭ್ಯರ್ಥಿಗಳ ಕೊರತೆ ಇಲ್ಲ, ಯಾರೂ ಸ್ಪರ್ಧೆಗೆ ಹಿಂದೇಟು ಹಾಕುತ್ತಿಲ್ಲ’ ಎಂದು ಡಾ.ಜಿ.ಪರಮೇಶ್ವರ್ ಹೇಳಿದರು.

ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂಬ ವಿಪಕ್ಷದವರ ಹೇಳಿಕೆಗೆ ಭಾನುವಾರ ಮಾಧ್ಯಮದವರೊಂದಿಗೆ ಪ್ರತಿಕ್ರಿಯಿಸಿ, ಅದಕ್ಕೆ ಹಗಲುಗನಸು ಅಂತಾರೆ, ಅವರು ಕನಸು ಕಾಣಲಿ, ನಾವು ಆಡಳಿತ ಮಾಡುತ್ತಾ ಇರುತ್ತೇವೆ ಎಂದರು.

ಕೋರ್ಟ್ ಆದೇಶ ಮಾಡಿದ ಜಾಗ ಬಿಟ್ಟು ಬೇರೆ ಕಡೆ ರಾಮಮಂದಿರ ನಿರ್ಮಾಣ ಮಾಡಿದ್ದಾರೆ ಎಂಬ ಸಚಿವ ಸಂತೋಷ್ ಲಾಡ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಸಂತೋಷ್ ಲಾಡ್ ಹೇಳಿಕೆಯನ್ನು ಆರೋಪ ಏಕೆ ಅಂತೀರಿ, ಸಂತೋಷ್ ಲಾಡ್ ವಸ್ತು ಸ್ಥಿತಿ ಹೇಳಿದ್ದಾರೆ. ಅದು ಆರೋಪ ಎನ್ನುವುದು ಸರಿಯಲ್ಲ ಎಂದು ಲಾಡ್‌ ಹೇಳಿಕೆಯನ್ನು ಸಮರ್ಥಿಸಿಕೊಂಡರು. 

ADVERTISEMENT

ಶಿರಾಳಕೊಪ್ಪದ ಬಸ್‍ನಲ್ಲಿ ಸ್ಫೋಟ ವಿಚಾರಕ್ಕೆ ಉತ್ತರಿಸಿದ ಅವರು, ಈ ಬಗ್ಗೆ ತನಿಖೆ ಮಾಡಿ ಕ್ರಮ ಕೈಗೊಳ್ಳುತ್ತೇವೆ. ಹಾನಗಲ್ ಗ್ಯಾಂಗ್‍ರೇಪ್ ವಿಚಾರದ ಬಗ್ಗೆ ಸಾಕಷ್ಟು ಚರ್ಚೆ ನಡೆದಿದೆ. ಸದನಲ್ಲಿಯೂ ಚರ್ಚೆ ಆಗಿದೆ. ಉತ್ತರ ಕೊಡುತ್ತೇನೆ. ಪೊಲೀಸರು ತನಿಖೆ ಮಾಡಿ ಕ್ರಮ ಕೈಗೊಳ್ಳುತ್ತಾರೆ ಎಂದರು.

ಕಾಂಗ್ರೆಸ್‍ನಲ್ಲಿ ಡಿಸಿಎಂ ಹುದ್ದೆ ಪೈಪೋಟಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಹೈಕಮಾಂಡ್‍ಗೆ ಎಲ್ಲವೂ ಗೊತ್ತಿದೆ. ಗೊತ್ತಿರದೇ ಇರೋದು ಏನಿಲ್ಲ, ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ಎಲ್ಲರೂ ಬದ್ಧರಿರಬೇಕು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.