ADVERTISEMENT

ಹಾವೇರಿ: ತರಬೇತಿ ಕಾರ್ಯಕ್ರಮಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 26 ಸೆಪ್ಟೆಂಬರ್ 2020, 13:54 IST
Last Updated 26 ಸೆಪ್ಟೆಂಬರ್ 2020, 13:54 IST
ಹಾವೇರಿಯ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಭಾಭವನದಲ್ಲಿ ಶನಿವಾರ ‘ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ಬಡತನ ನಿರ್ಮೂಲನಾ ಯೋಜನೆ-2015’ ಕುರಿತ ತರಬೇತಿ ಕಾರ್ಯಕ್ರಮ ನಡೆಯಿತು 
ಹಾವೇರಿಯ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಭಾಭವನದಲ್ಲಿ ಶನಿವಾರ ‘ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ಬಡತನ ನಿರ್ಮೂಲನಾ ಯೋಜನೆ-2015’ ಕುರಿತ ತರಬೇತಿ ಕಾರ್ಯಕ್ರಮ ನಡೆಯಿತು    

ಹಾವೇರಿ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ನ್ಯಾಯವಾದಿಗಳ ಸಂಘದ ಸಹಯೋಗದಲ್ಲಿ ಕಾನೂನು ಸೇವೆಗಳ ಅಧಿಕಾರಿಗಳು ಹಾಗೂ ಅವರಿಗೆ ಸಹಾಯಕರಾಗಿ ಕಾರ್ಯನಿರ್ವಹಿಸಲು ನೇಮಕಗೊಂಡ ಅರೆ ನ್ಯಾಯಿಕ ಸ್ವಯಂ ಸೇವಕರುಗಳಿಗೆ “ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ಬಡತನ ನಿರ್ಮೂಲನಾ ಯೋಜನೆ-2015 ಅನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಕುರಿತು ತರಬೇತಿ ಕಾರ್ಯಕ್ರಮ ಶನಿವಾರ ನಗರದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಭಾಭವನದಲ್ಲಿ ಜರುಗಿತು.

ಕೌಟುಂಬಿಕ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶರಾದ ಕಿರಣ ಕಿಣಿ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸಿ.ಜೆ.ಎಂ. ಎ.ವಿ.ಪಾಟೀಲ ಅವರು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ವಿ.ಆರ್.ಗುಡಿ, ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷರಾದ ಕೆ.ಸಿ.ಪಾವಲಿ ಹಾಗೂ ಪ್ರಧಾನ ಕಾರ್ಯದರ್ಶಿಗಳಾದ ಪಿ.ಎಂ.ಬೆನ್ನೂರ ಅವರು ಭಾಗವಹಿಸಿದ್ದರು.

ಕರ್ನಾಟಕ ಉಚ್ಛನ್ಯಾಯಾಲಯರವರ ಎಸ್.ಓ.ಪಿ ಮಾರ್ಗಸೂಚಿ ಅನುಸಾರ ತರಬೇತಿ ನೀಡಲಾಯಿತು. ಕೌಶಲ್ಯಾಭಿವೃದ್ಧಿ ಇಲಾಖೆ ಸಹಾಯಕ ನಿರ್ದೇಶಕ ಪ್ರವೀಣ ಬೂದಿಹಾಳ ಹಾಗೂ ವ್ಯವಸ್ಥಾಪಕ ವಿನಾಯಕ ಬಾಬು ಅವರು ತರಬೇತಿ ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.