ಹಾನಗಲ್: ‘ಗೃಹಲಕ್ಷ್ಮೀ ಯೋಜನೆಯು ಬೆಲೆ ಏರಿಕೆ ವಿರುದ್ಧ ಹೋರಾಡಲು ಸಹಕಾರಿಯಾಗಿದೆ’ ಎಂದು ಶಾಸಕ ಶ್ರೀನಿವಾಸ ಮಾನೆ ಅಭಿಪ್ರಾಯಪಟ್ಟರು.
ಇಲ್ಲಿನ ತಹಶೀಲ್ದಾರ್ ಕಚೇರಿಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಗೃಹಲಕ್ಷ್ಮೀ ಯೋಜನೆಯ ನೋಂದಣಿ ಕೌಂಟರ್‌ಗೆ ಚಾಲನೆ ನೀಡಿ ಮಾತನಾಡಿದರು.
‘ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಬಸವಳಿದಿರುವ ಕುಟುಂಬಗಳಿಗೆ ಆರ್ಥಿಕ ಶಕ್ತಿ ತುಂಬುವ ನಿಟ್ಟಿನಲ್ಲಿ ಪ್ರತಿ ತಿಂಗಳು ಗೃಹಲಕ್ಷ್ಮೀ ಯೋಜನೆಯಡಿ ಮನೆ ಯಜಮಾನಿಗೆ ₹2 ಸಾವಿರ ಆರ್ಥಿಕ ನೆರವು ನೀಡಲಾಗುವುದು. ಯೋಜನೆಯಡಿ ರಾಜ್ಯದ 1.28 ಕೋಟಿ ಕುಟುಂಬಗಳಿಗೆ ಅನುಕೂಲವಾಗಲಿದೆ’ ಎಂದರು.
ಹಲವು ಫಲಾನುಭವಿಗಳಿಗೆ ಶಾಸಕ ಮಾನೆ ಯೋಜನೆಯ ಮಂಜೂರಾತಿ ಆದೇಶ ಪತ್ರ ವಿತರಿಸಿದರು.
ತಹಶೀಲ್ದಾರ್ ಶಶಿಧರ ಮಾಡ್ಯಾಳ, ತಾಲ್ಲೂಕು ಪಂಚಾಯ್ತಿ ಇಒ ಕೆ.ಎಂ.ಮಲ್ಲಿಕಾರ್ಜುನ, ಸಿಡಿಪಿಒ ರಂಗನಾಥ ಸಿ. ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.