ADVERTISEMENT

ಹಿರೇಕೆರೂರ: ಡಮ್ಮಳ್ಳಿ ಕೆರೆ ಏರಿ ಒಡೆದು ಬೆಳೆ ಜಲಾವೃತ

​ಪ್ರಜಾವಾಣಿ ವಾರ್ತೆ
Published 24 ಜುಲೈ 2021, 14:52 IST
Last Updated 24 ಜುಲೈ 2021, 14:52 IST
ಡಮ್ಮಳ್ಳಿ ಗ್ರಾಮದ ದೊಡ್ಡ ಕೆರೆ ಒಡೆದಿರುವುದು
ಡಮ್ಮಳ್ಳಿ ಗ್ರಾಮದ ದೊಡ್ಡ ಕೆರೆ ಒಡೆದಿರುವುದು   

ಹಿರೇಕೆರೂರ: ತಾಲ್ಲೂಕಿನಲ್ಲಿ ಶನಿವಾರ ಮಳೆಯ ಅಬ್ಬರ ಕಡಿಮೆಯಾಗಿದ್ದರೂ ತಗ್ಗು ಪ್ರದೇಶದಲ್ಲಿ ನೀರು ನಿಂತು ಅಪಾರ ಪ್ರಮಾಣದ ಬೆಳೆಗಳು ಜಲಾವೃತಗೊಂಡಿವೆ. ತಾಲ್ಲೂಕಿನಲ್ಲಿ ಮೂರು ದಿನಗಳಲ್ಲಿ 55 ಮನೆಗಳು ಭಾಗಶಃ ಹಾನಿಗೊಳಗಾಗಿವೆ.

ಶ್ರೀರಾಮನಕೊಪ್ಪ ಗ್ರಾಮದಲ್ಲಿ ಕೆಲವು ಮನೆಗಳಿಗೆ ನೀರು ನುಗ್ಗಿದ್ದರಿಂದ ಗ್ರಾಮದ ಶಾಲೆಯಲ್ಲಿ ಕಾಳಜಿ ಕೇಂದ್ರ ತೆರೆಯಲಾಗಿದೆ. ಉಪವಿಭಾಗಾಧಿಕಾರಿ ಶಿವಾನಂದ ಉಳ್ಳಾಗಡ್ಡಿ ಗಂಜಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಡಮ್ಮಳ್ಳಿ ಗ್ರಾಮದ ದೊಡ್ಡ ಕೆರೆ ಒಡೆದ ಪರಿಣಾಮ ನೂರಾರು ಎಕರೆ ಜಮೀನು ಜಲಾವೃತಗೊಂಡು ರೈತರ ಬೆಳೆ ಹಾಳಾಗಿದೆ, ಗ್ರಾಮದ ಹೊರವಲಯದಲ್ಲಿರುವ ದೊಡ್ಡ ಕೆರೆಗೆ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನೀರು ಸಾಕಷ್ಟು ಪ್ರಮಾಣದಲ್ಲಿ ಹರಿದು ಕೆರೆ ಏರಿ ಒಡೆದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಡಮ್ಮಳ್ಳಿ ಮತ್ತು ಆರಿಕಟ್ಟಿ ಗ್ರಾಮಗಳ ಸಂಪರ್ಕ ರಸ್ತೆ ಸಂಪೂರ್ಣ ಹಾಳಾಗಿದೆ.

ADVERTISEMENT

ತಹಶೀಲ್ದಾರ್ ಉಮಾ ಕೆ.ಎ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ತುರ್ತು ದುರಸ್ತಿ ಕಾರ್ಯ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.