ADVERTISEMENT

ಆರ್ಥಿಕ ನೆರವು ನೀಡಲು ಮನವಿ

​ಪ್ರಜಾವಾಣಿ ವಾರ್ತೆ
Published 2 ಜೂನ್ 2020, 12:18 IST
Last Updated 2 ಜೂನ್ 2020, 12:18 IST
ಲಾಕ್‌ಡೌನ್‌ನಿಂದ ಜೀವನ ನಿರ್ವಹಣೆ ಕಷ್ಟವಾಗಿದ್ದು, ಆರ್ಥಿಕ ನೆರವು ನೀಡಬೇಕು ಎಂದು ಒತ್ತಾಯಿಸಿ ಹಾವೇರಿ ತಾಲ್ಲೂಕು ವೀರಶೈವ ಜಂಗಮ ಅರ್ಚಕರ ಮತ್ತು ಪುರೋಹಿತರ ಸಂಘದ ವತಿಯಿಂದ ತಹಶೀಲ್ದಾರ್‌ ಶಂಕರ್‌ ಅವರಿಗೆ ಮಂಗಳವಾರ ಮನವಿ ಸಲ್ಲಿಸಲಾಯಿತು  
ಲಾಕ್‌ಡೌನ್‌ನಿಂದ ಜೀವನ ನಿರ್ವಹಣೆ ಕಷ್ಟವಾಗಿದ್ದು, ಆರ್ಥಿಕ ನೆರವು ನೀಡಬೇಕು ಎಂದು ಒತ್ತಾಯಿಸಿ ಹಾವೇರಿ ತಾಲ್ಲೂಕು ವೀರಶೈವ ಜಂಗಮ ಅರ್ಚಕರ ಮತ್ತು ಪುರೋಹಿತರ ಸಂಘದ ವತಿಯಿಂದ ತಹಶೀಲ್ದಾರ್‌ ಶಂಕರ್‌ ಅವರಿಗೆ ಮಂಗಳವಾರ ಮನವಿ ಸಲ್ಲಿಸಲಾಯಿತು     

ಹಾವೇರಿ: ಕೋವಿಡ್‌ ಲಾಕ್‌ಡೌನ್‌ನಿಂದ ವೀರಶೈವ ಜಂಗಂ ಪುರೋಹಿತರು ಹಾಗೂ ಅರ್ಚಕರ ಬದುಕು ದುಸ್ತರವಾಗಿದೆ. ಹಾಗಾಗಿ ಆರ್ಥಿಕ ನೆರವು ನೀಡಬೇಕು ಎಂದು ಹಾವೇರಿ ತಾಲ್ಲೂಕು ವೀರಶೈವ ಜಂಗಮ ಅರ್ಚಕರ ಮತ್ತು ಪುರೋಹಿತರ ಸಂಘದ ಸದಸ್ಯರು ಮಂಗಳವಾರ ಸರ್ಕಾರವನ್ನು ಒತ್ತಾಯಿಸಿದರು.

ಎಲ್ಲ ದೇವಸ್ಥಾನ, ಮಠ ಮಂದಿರಗಳ ಪೂಜಾ ಸಮಾರಂಭ, ಜಾತ್ರೆ, ಉತ್ಸವ, ಹಬ್ಬ, ವಿವಾಹ, ಗೃಹಪ್ರವೇಶ ಮುಂತಾದ ಕಾರ್ಯಕ್ರಮಗಳು ರದ್ದಾದ ಪರಿಣಾಮ ಜೀವನ ನಿರ್ವಹಣೆ ಕಷ್ಟವಾಗಿದೆ. ಹಾಗಾಗಿ ಪರಿಹಾರ ನೀಡುವ ಮೂಲಕ ನಮ್ಮ ನೆರವಿಗೆ ಸರ್ಕಾರ ಧಾವಿಸಬೇಕು ಎಂದು ಮನವಿ ಮಾಡಿದ್ದಾರೆ.

ತಹಶೀಲ್ದಾರ್‌ ಶಂಕರ್‌ ಅವರಿಗೆ ಸಂಘದ ವತಿಯಿಂದ ಮನವಿ ಸಲ್ಲಿಸಲಾಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.