ADVERTISEMENT

ದಯಾಮರಣ ವರದಿಗೆ ಸಚಿವರ ಸ್ಪಂದನೆ

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2020, 19:31 IST
Last Updated 25 ಸೆಪ್ಟೆಂಬರ್ 2020, 19:31 IST
ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್‌. ಸುರೇಶಕುಮಾರ್‌
ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್‌. ಸುರೇಶಕುಮಾರ್‌   

ಹಾವೇರಿ: ಪಿಂಚಣಿ ಸೌಲಭ್ಯ ಸಿಗದೆ, ದಯಾಮರಣ ನೀಡುವಂತೆ ರಾಷ್ಟ್ರಪತಿಗೆ ಅರ್ಜಿ ಸಲ್ಲಿಸಿರುವ ಜಿಲ್ಲೆಯ 8 ನಿವೃತ್ತ ಶಿಕ್ಷಕರೊಂದಿಗೆ ಬೆಂಗಳೂರಿನಲ್ಲಿ ಸೆ.28ರಂದು ಸಭೆ ನಡೆಸಿ, ಸಮಸ್ಯೆ ಇತ್ಯರ್ಥಪಡಿಸುವುದಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್‌. ಸುರೇಶಕುಮಾರ್‌ ಭರವಸೆ ನೀಡಿದ್ದಾರೆ.

ಸೆ.25ರಂದು ‘ಪ್ರಜಾವಾಣಿ’ ಮುಖಪುಟದಲ್ಲಿ ಪ್ರಕಟವಾಗಿದ್ದ ‘ದಯಾಮರಣ ಕೋರಿ ನಿವೃತ್ತ ಶಿಕ್ಷಕರಿಂದ ಮನವಿ’ ವರದಿಗೆ ಸ್ಪಂದಿಸಿದ ಸಚಿವರು, ಹಾವೇರಿಯ ಡಿಡಿಪಿಐ ಅಂದಾನಪ್ಪ ವಡಗೇರಿ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದಾರೆ. ನಿವೃತ್ತ ಶಿಕ್ಷಕರನ್ನು ಸಭೆಗೆ ಕರೆತರುವಂತೆ ಸೂಚನೆ ನೀಡಿದ್ದಾರೆ.

‘ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿರುವುದರಿಂದ ಸಮಸ್ಯೆಗೆ ಪರಿಹಾರ ಸಿಗುವ ಆಶಾಭಾವನೆ ಇದೆ. ನಾವೆಲ್ಲರೂ ಸಭೆಗೆ ಹಾಜರಾಗಲಿದ್ದೇವೆ’ ಎಂದು ರಾಜ್ಯ ಅನುದಾನಿತ ಶಾಲಾ–ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘದ ಅಧ್ಯಕ್ಷ ಜಿ.ಹನುಮಂತಪ್ಪ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.