ಅಣ್ಣಿಗೇರಿ: ಇಸ್ಲಾಂ ಧರ್ಮ ಪ್ರವರ್ತಕ ಮುಹಮ್ಮದ್ ಪೈಗಂಬರರ ಜನ್ಮದಿನದ ಅಂಗವಾಗಿ ಮುಸ್ಲಿಂ ಸಮುದಾಯದವರು ಭಾನುವಾರ ನಗರದಲ್ಲಿ ಹಮ್ಮಿಕೊಂಡಿದ್ದ ಮೆರವಣಿಗೆ ವಿಜೃಂಭಣೆಯಿಂದ ನಡೆಯಿತು.
ದಾಸೋಹ ಮಠದ ಶಿವಕುಮಾರ ಸ್ವಾಮೀಜಿ, ಕಮಲಾಪೂರ ದರ್ಗಾದ ಸಜ್ಜಾದ ಸಯ್ಯದ್ ಪೀರಾ, ಶಾಸಕ ಎನ್.ಎಚ್.ಕೋನರಡ್ಡಿ ಚಾಲನೆ ನೀಡಿದರು.
ಹೊರಕೇರಿ ಓಣಿ ಹಿಂದೂ-ಮುಸ್ಲಿಂ ಸಮಾಜದವರು ಅನ್ನಪ್ರಸಾದ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು.
ಪುರಸಭೆ ಅಧ್ಯಕ್ಷ ಶಿವಾನಂದ ಬೆಳಹಾರ, ಅಂಜುಮನ್ ಸಂಸ್ಥೆ ಅಧ್ಯಕ್ಷ ಐ.ಜಿ.ಸಮುದ್ರಿ, ಹಸನಸಾಬ ಘೂಡುನಾಯ್ಕರ, ಶರಣಬಸಪ್ಪ ದೇಶಮುಖ, ಪ್ರಕಾಶ ಅಂಗಡಿ, ಷಣ್ಮುಖ ಗುರಿಕಾರ, ಹಸನಸಾಬ ಸುಂಕದ, ಬಸವರಾಜ ಕೋಳಿವಾಡ ಮಹ್ಮದರಫೀಕ ಲೋಕಾಪೂರಿ ಪಾಲ್ರೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.