ಹಿರೇಕೆರೂರು: ಇಲ್ಲಿನ ಪಟ್ಟಣ ಪಂಚಾಯ್ತಿಗೆ ಎರಡನೇ ಅವಧಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಚುನಾವಣೆ ಆಗಸ್ಟ್ 22 ರಂದು ಬೆಳಿಗ್ಗೆ 11 ಗಂಟೆಯಿಂದ ನಡೆಯಲಿದೆ.
ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಎಂದು ಘೋಷಣೆಯಾಗಿದ್ದು. ಪಟ್ಟಣ ಪಂಚಾಯತಿಯು 20 ಸದಸ್ಯರ ಬಲ ಹೊಂದಿದ್ದು,ಇದರಲ್ಲಿ ಬಿಜೆಪಿ 8 ಕಾಗ್ರೇಸ್ 7 ಜೆಡಿಎಸ್ 1 ಹಾಗೂ ಪಕ್ಷೇತರರು 4 ಸ್ಥಾನ ಹೊಂದಿದ್ದು ಇದರ ಜೊತೆಗೆ ಶಾಸಕರು ಮತ್ತು ಸಂಸದರ ಮತವನ್ನೂ ಹೊಂದಿದೆ. ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನದ ಆಯ್ಕೆಗೆ 12 ಮತಗಳು ಅವಶ್ಯವಾಗಿವೆ.ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ದಿನಾಂಕ ಪ್ರಕಟವಾದ ಬೆನ್ನಲ್ಲೆ ಎಲ್ಲ ರಾಜಕೀಯ ಪಕ್ಷಗಳಲ್ಲಿ ತೀವ್ರ ಪೈಪೋಟಿ ಶುರುವಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.