ADVERTISEMENT

ದಾಳಿ: ₹2350 ದಂಡ

​ಪ್ರಜಾವಾಣಿ ವಾರ್ತೆ
Published 5 ನವೆಂಬರ್ 2020, 14:23 IST
Last Updated 5 ನವೆಂಬರ್ 2020, 14:23 IST
ಹಾವೇರಿ ನಗರದಲ್ಲಿ ತಂಬಾಕು ಉತ್ಪನ್ನ ಮಾರಾಟ ಮಾಡುತ್ತಿದ್ದ ಅಂಗಡಿ ಮೇಲೆ ಗುರುವಾರ ದಾಳಿ ನಡೆಸಿ, ದಂಡ ವಿಧಿಸಲಾಯಿತು 
ಹಾವೇರಿ ನಗರದಲ್ಲಿ ತಂಬಾಕು ಉತ್ಪನ್ನ ಮಾರಾಟ ಮಾಡುತ್ತಿದ್ದ ಅಂಗಡಿ ಮೇಲೆ ಗುರುವಾರ ದಾಳಿ ನಡೆಸಿ, ದಂಡ ವಿಧಿಸಲಾಯಿತು    

ಹಾವೇರಿ: ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ವಿವಿಧ ಅಧಿಕಾರಿಗಳನ್ನೊಳಗೊಂಡ ತಂಡ ಹಾವೇರಿ ನಗರದ ಎಂ.ಜಿ.ರಸ್ತೆ, ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಹತ್ತಿರ ಹಾಗೂ ಹಾನಗಲ್ ರಸ್ತೆಯ ವಿವಿಧ 22 ಅಂಗಡಿಗಳ ಮೇಲೆ ದಾಳಿ ನಡೆಸಿ ದಂಡ ವಸೂಲಿ ಮಾಡಿದೆ.

ತಂಬಾಕು ನಿಯಂತ್ರಣ ಕಾಯ್ದೆ-2003ರ ವಿರುದ್ಧವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವ ಮತ್ತು ನೇರ-ಪರೋಕ್ಷವಾಗಿ ತಂಬಾಕು ಜಾಹೀರಾತು ಪ್ರದರ್ಶನ, ಶಾಲಾ-ಕಾಲೇಜು ಆವರಣದ 100 ಮೀಟರ್ ಅಂತರದೊಳಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿರುವ ಅಂಗಡಿ, ಬೇಕರಿ, ಹೋಟೆಲ್ ಮತ್ತು ಹೋಲ್‍ಸೇಲ್ ಅಂಗಡಿ ಮಾಲೀಕರಿಗೆ ನೋಟೀಸ್ ಜಾರಿ ಮಾಡಿ ತಂಬಾಕು ನಿಯಂತ್ರಣ ಕಾಯ್ದೆ-2003ರ ಅಡಿಯಲ್ಲಿ ₹2350 ದಂಡ ವಸೂಲಿ ಮಾಡಲಾಗಿದೆ.

ದಾಳಿಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಸಲಹೆಗಾರ ಡಾ.ಸಂತೋಷ ದಡ್ಡಿ, ದಾದಾಪೀರ ಹುಲಿಕಟ್ಟಿ, ಮಾಲತೇಶ ಪುಟ್ಟನಗೌಡ್ರ ಹಾಗೂ ಪೊಲೀಸ್ ಸಿಬ್ಬಂದಿ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.