ADVERTISEMENT

‘ಪರಿಸರ ಕಾಳಜಿ ಮನೆಯಿಂದ ಆರಂಭವಾಗಲಿ’

​ಪ್ರಜಾವಾಣಿ ವಾರ್ತೆ
Published 7 ಜೂನ್ 2023, 7:05 IST
Last Updated 7 ಜೂನ್ 2023, 7:05 IST
ರಾಣೆಬೆನ್ನೂರಿನ ಆರ್‌ಟಿಇಎಸ್‌ ಆರ್.ಟಿ.ಇ.ಎಸ್. ಶಿಕ್ಷಣ ಸಂಸ್ಥೆಯ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ಏರ್ಪಡಿಸಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಹಾವೇರಿ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಸುರೇಶ ಜಂಗಮಶೆಟ್ಟಿ ಮಾತನಾಡಿದರು
ರಾಣೆಬೆನ್ನೂರಿನ ಆರ್‌ಟಿಇಎಸ್‌ ಆರ್.ಟಿ.ಇ.ಎಸ್. ಶಿಕ್ಷಣ ಸಂಸ್ಥೆಯ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ಏರ್ಪಡಿಸಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಹಾವೇರಿ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಸುರೇಶ ಜಂಗಮಶೆಟ್ಟಿ ಮಾತನಾಡಿದರು   

ರಾಣೆಬೆನ್ನೂರು: ನವೀಕರಿಸಬಹುದಾದ ಇಂಧನಗಳನ್ನು ಹೆಚ್ಚು ಹೆಚ್ಚು ಉಪಯೋಗಿಸಬೇಕು. ಪರಿಸರ ಸ್ನೇಹಿಯಾದ ಸೌರಶಕ್ತಿ ಮತ್ತು ಪವನಶಕ್ತಿಗಳಿಂದ ವಿದ್ಯುತ್ ಉತ್ಪಾದಿಸುವತ್ತ ಗಮನಹರಿಸಬೇಕು. ಪರಿಸರ ಕಾಳಜಿಯು ಪ್ರತಿ ಮನೆಯಿಂದ ಪ್ರಾರಂಭವಾಗಬೇಕು ಎಂದು ಹಾವೇರಿ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಸುರೇಶ ಜಂಗಮಶೆಟ್ಟಿ ಹೇಳಿದರು.

ನಗರದ ರಾ.ತಾ.ಶಿ.ಸಂಸ್ಥೆಯ ಕಲಾ, ವಿಜ್ಞಾನ, ಹಾಗೂ ವಾಣಿಜ್ಯ ಪದವಿ ಮಹಾವಿದ್ಯಾಲಯ, ಆರ್.ಟಿ.ಇ.ಎಸ್. ಶಿಕ್ಷಣ ಮಹಾವಿದ್ಯಾಲಯ, ಭೂಗೋಳಶಾಸ್ತ್ರ ವಿಭಾಗ, ಪರಿಸರ ವೇದಿಕೆ ಹಾಗೂ ಐ.ಕ್ಯೂ.ಎ.ಸಿ ಆಶ್ರಯದಲ್ಲಿ ಸೋಮವಾರ ಏರ್ಪಡಿಸಿದ ವಿಶ್ವಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮನೆಯ ಸುತ್ತಮುತ್ತ ಹೆಚ್ಚು ಹೆಚ್ಚು ಸಸ್ಯಗಳನ್ನು ಬೆಳೆಸುವ ಮೂಲಕ ಮನೆಯ ಪರಸರ ಸುತ್ತಮುತ್ತಲಿನ ಪರಿಸರವನ್ನು ಅಂದವಾಗಿಟ್ಟುಕೊಳ್ಳಬೇಕೆಂದು ವಿದ್ಯಾರ್ಥಿಗಳಿಗೆ ತಿಳಿಸಿದರು.

ADVERTISEMENT

ಸಂಸ್ಥೆಯ ಅದ್ಯಕ್ಷ ಎಸ್.ವಿ. ಸಾವುಕಾರ ಕಾರ್ಯಕ್ರಮ ಉದ್ಘಾಟಿಸಿದರು. ಪ್ರಾಚಾರ್ಯ ಸಿ.ಎ. ಹರಿಹರ ಅಧ್ಯಕ್ಷತೆ ವಹಿಸಿದ್ದರು. ವಿಭಾಗದ ಮುಖ್ಯಸ್ಥ ಡಾ.ಡಿ.ವ್ಹಿ. ಜಂಗಣ್ಣನವರ, ಬಿ.ಎಡ್.ಕಾಲೇಜಿನ ಪ್ರಾಚಾರ್ಯ ಡಾ.ಕೊಟ್ರೇಶ್ ಬಸಾಪೂರ, ಪ್ರೊ. ಎಲ್.ಎಂ. ಮಾವಿನತೋಪ, ಡಿ.ಎಂ.ಇಂಗಳಗಿ, ದೀಪಾ ಅಡ್ಮನಿ, ಸಿ.ಎನ್. ಪೂಜಾರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.