ADVERTISEMENT

ಪರಿಸರ ರಕ್ಷಣೆ; ಪ್ರತಿಯೊಬ್ಬರ ಹೊಣೆ: ಎಂ.ಎಚ್. ಪಾಟೀಲ

​ಪ್ರಜಾವಾಣಿ ವಾರ್ತೆ
Published 23 ಜೂನ್ 2022, 4:22 IST
Last Updated 23 ಜೂನ್ 2022, 4:22 IST
ಹಾವೇರಿ ಜಿಲ್ಲಾ ಗುರುಭವನದಲ್ಲಿ ಬುಧವಾರ ಏರ್ಪಡಿಸಿದ್ದ ಜಾಗತಿಕ ಪರಿಸರ ದಿನಾಚರಣೆ ಹಾಗೂ ಬಹುಮಾನ ವಿತರಣಾ ಸಮಾರಂಭವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್‌.ಪಾಟೀಲ ಉದ್ಘಾಟಿಸಿದರು. ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಡಾ.ಸುಧಾ ಎಂ.ಕೆ. ಇದ್ದಾರೆ
ಹಾವೇರಿ ಜಿಲ್ಲಾ ಗುರುಭವನದಲ್ಲಿ ಬುಧವಾರ ಏರ್ಪಡಿಸಿದ್ದ ಜಾಗತಿಕ ಪರಿಸರ ದಿನಾಚರಣೆ ಹಾಗೂ ಬಹುಮಾನ ವಿತರಣಾ ಸಮಾರಂಭವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್‌.ಪಾಟೀಲ ಉದ್ಘಾಟಿಸಿದರು. ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಡಾ.ಸುಧಾ ಎಂ.ಕೆ. ಇದ್ದಾರೆ   

ಹಾವೇರಿ: ಪ್ರಕೃತಿ ಮಾತೆ ನಮ್ಮ ಆಸೆಗಳನ್ನು ಪೂರೈಸಬಲ್ಲಳು, ಆದರೆ ದುರಾಸೆಯನ್ನಲ್ಲ. ನಮಗಿರುವುದು ಒಂದೇ ಭೂಮಿ, ಅದನ್ನು ಸಂಕ್ಷಿಸಿರುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್. ಪಾಟೀಲ ಹೇಳಿದರು.

ಜಿಲ್ಲಾ ಗುರುಭವನದಲ್ಲಿ ಬುಧವಾರ ಪ್ರಾದೇಶಿಕ ಕಚೇರಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಹಾವೇರಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸಹಯೋಗದಲ್ಲಿ ನಡೆದ ಜಾಗತಿಕ ಪರಿಸರ ದಿನಾಚರಣೆ ಹಾಗೂ ಬಹುಮಾನ ವಿತರಣಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ತಾಲ್ಲೂಕಿನಲ್ಲಿ 51,730 ವಿದ್ಯಾರ್ಥಿಗಳಿದ್ದು, ಅವರೆಲ್ಲ ಶಾಲಾ ಆವರಣದಲ್ಲಿ ಸಸಿನೆಟ್ಟು ಪೋಷಿಸಿದರೆ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಉತ್ತಮ ಕೊಡುಗೆಯಾಗುವುದು. ಮಕ್ಕಳು ಪರಿಸರದ ಬಗ್ಗೆ ಅರಿವು ಮೂಡಿಸಬೇಕು ಎಂದು ಹೇಳಿದರು.

ADVERTISEMENT

ಸಾಹಿತಿ ಹನುಮಂತಗೌಡ ಗೊಲ್ಲರ ಮಾತನಾಡಿ, ಒಂದು ಕೆರೆ 10 ಬಾವಿಗಳಿಗೆ ಸಮಾನ, ಒಂದು ಸರೋವರ 10 ಕೆರೆಗಳಿಗೆ ಸಮಾನ, ಒಂದು ವೃಕ್ಷ 10 ಸುಪುತ್ರಿಯರಿಗೆ ಸಮಾನ ಎಂದು ವ್ಯಾಸ ಮಹರ್ಷಿಯ ವಾಕ್ಯವನ್ನು ಉದ್ಧರಿಸಿ ಪರಿಸರ ನಾಶ, ಸರ್ವನಾಶಕ್ಕೆ ನಾಂದಿ ಎಂದು ಹೇಳಿದರು.

ದೈಹಿಕ ಶಿಕ್ಷಣಾಧಿಕಾರಿ ರಾಯಪ್ಪ ಮೇಟಿ ಮಾತನಾಡಿ, ಉತ್ತಮ ಪರಿಸರದಿಂದ ಉತ್ತಮ ಆರೋಗ್ಯ ಎಂದರು.

ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಡಾ.ಸುಧಾ ಎಂ.ಕೆ. ಮಾತನಾಡಿ, ಪ್ರಬಂಧ ಹಾಗೂ ಚಿತ್ರಕಲೆ ಸ್ಪರ್ಧೆಗಳಲ್ಲಿ 33 ಶಾಲೆಗಳ 265 ವಿದ್ಯಾರ್ಥಿಗಳು ಪಾಲ್ಗೊಂಡಿದ್ದು, ಉತ್ತಮ ಪ್ರತಿಕ್ರಿಯೆ ದೊರೆತಿರುವುದು ಸಂತಸವನ್ನುಂಟು ಮಾಡಿದೆ ಎಂದರು.

ವಿಜೇತ ವಿದ್ಯಾರ್ಥಿಗಳಿಗೆ ಪುಸ್ತಕ, ಪ್ರಶಸ್ತಿ ಪತ್ರ ಹಾಗೂ ಪಾಲ್ಗೊಂಡ ಎಲ್ಲ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ನೀಡಲಾಯಿತು. ಮಂಡಳಿಯ ನಿಖಿಲ್ ಬೆನಕಟ್ಟಿ ಸ್ವಾಗತಿಸಿದರು. ಸವಿತಾ ಬೆಳ್ಳಿಗಟ್ಟಿ ಕಾರ್ಯಕ್ರಮ ನಿರೂಪಿಸಿದರು. ಶಿವಾನಂದ ದೊಡ್ಡಮನಿ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.