ADVERTISEMENT

ಹಾವೇರಿ | ಪ್ರವಾಹ ನಿರ್ವಹಣೆಗೆ ‘ಸಹಾಯವಾಣಿ’ ಸ್ಥಾಪನೆ

ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸಲು ಪ್ರತಿ ತಾಲ್ಲೂಕಿಗೆ ನೋಡಲ್‌ ಅಧಿಕಾರಿಗಳ ನೇಮಕ

​ಪ್ರಜಾವಾಣಿ ವಾರ್ತೆ
Published 10 ಆಗಸ್ಟ್ 2020, 12:49 IST
Last Updated 10 ಆಗಸ್ಟ್ 2020, 12:49 IST

ಹಾವೇರಿ: ಜಿಲ್ಲೆಯಲ್ಲಿ ಸುರಿಯುತ್ತಿರುವ ಸತತ ಮಳೆ ಹಾಗೂ ಪ್ರವಾಹ ಹಿನ್ನೆಲೆಯಲ್ಲಿ ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸಲು ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ‘ಕಂಟ್ರೋಲ್ ರೂಂ’ ಸ್ಥಾಪಿಸಲಾಗಿದೆ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ. ತುರ್ತು ಸಂದರ್ಭದಲ್ಲಿ ಸಾರ್ವಜನಿಕರು ಸಹಾಯವಾಣಿಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ತಿಳಿಸಿದ್ದಾರೆ.

ನೋಡಲ್ ಅಧಿಕಾರಿಗಳ ವಿವರ:

ಜಿಲ್ಲೆಯ ಪ್ರವಾಹ ಪಿಡಿತ ಪ್ರದೇಶಗಳ ಸಮರ್ಥ ನಿರ್ವಹಣೆ ಹಿನ್ನೆಲೆಯಲ್ಲಿ ಹಾವೇರಿ ತಾಲ್ಲೂಕಿಗೆ ನೋಡಲ್ ಅಧಿಕಾರಿಯಾಗಿ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಚೈತ್ರಾ (ಮೊ:94808 43036) ಮತ್ತು ಹಾವೇರಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ (ಮೊ:94808 68110) ಹಾಗೂ ಹೆಚ್ಚುವರಿ ನೋಡಲ್ ಅಧಿಕಾರಿಯಾಗಿ ಯುವಜನ ಮತ್ತು ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ತಿಪ್ಪೇಸ್ವಾಮಿ (ಮೊ:94824 55663) ಅವರನ್ನು ನೇಮಕ ಮಾಡಲಾಗಿದೆ.

ADVERTISEMENT

ರಾಣೆಬೆನ್ನೂರ ತಾಲ್ಲೂಕಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಗುಡ್ಡಪ್ಪ ಜಿ (ಮೊ:99009 77876) ಮತ್ತು ರಾಣೆಬೆನ್ನೂರು ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಹೆಚ್ಚುವರಿ ನೋಡಲ್ ಅಧಿಕಾರಿಯಾಗಿ ರೇಷ್ಮೆ ಇಲಾಖೆಯ ಉಪನಿರ್ದೇಶಕ ಕೃಷ್ಣಪ್ಪ ಬಿ.ಎಲ್ (ಮೊ:9482155119) ಅವರನ್ನು ನೇಮಕ ಮಾಡಲಾಗಿದೆ.

ಬ್ಯಾಡಗಿ ತಾಲ್ಲೂಕಿಗೆ ಜಿಲ್ಲಾ ನೋಂದಣಾಧಿಕಾರಿ ಡೊಂಬರಮತ್ತೂರ (ಮೊ:9880122099) ಮತ್ತು ಬ್ಯಾಡಗಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಹೆಚ್ಚುವರಿ ನೋಡಲ್ ಅಧಿಕಾರಿಯಾಗಿ ಜಿಲ್ಲಾ ಪಂಚಾಯಿತಿ ಸಹಾಯಕ ಕಾರ್ಯದರ್ಶಿ ಜಾಫರ್ ಸುತಾರ (ಮೊ:9480461770) ಅವರನ್ನು ನೇಮಕ ಮಾಡಲಾಗಿದೆ.

ಹಿರೇಕೆರೂರ ಮತ್ತು ರಟ್ಟೀಹಳ್ಳಿ ತಾಲ್ಲೂಕಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಜಮಖಾನೆ (ಮೊ:79755 52336) ಮತ್ತು ಹಿರೇಕೆರೂರ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಹೆಚ್ಚುವರಿ ನೋಡಲ್ ಅಧಿಕಾರಿಯಾಗಿ ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕರನ್ನು (ಮೊ:94484 14089) ನೇಮಕ ಮಾಡಲಾಗಿದೆ.

ಸವಣೂರ ತಾಲ್ಲೂಕಿಗೆ ಪರಿಶಿಷ್ಟ ವರ್ಗಗಳ ಕಲ್ಯಾಣ ಜಿಲ್ಲಾ ಅಧಿಕಾರಿ ನಾಗರಾಜ (ಮೊ:99166 48339) ಮತ್ತು ತಾಲ್ಲೂಕು ಸವಣೂರು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಹೆಚ್ಚುವರಿ ನೋಡಲ್ ಅಧಿಕಾರಿಯಾಗಿ ಮಹಿಳಾ ಮತ್ತು ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪಿ.ವೈ.ಶೆಟ್ಟಪ್ಪನವರ (ಮೊ:94800 22969) ಅವರನ್ನು ನೇಮಕ ಮಾಡಲಾಗಿದೆ.

ಶಿಗ್ಗಾವಿ ತಾಲ್ಲೂಕಿಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಮಲ್ಲಿಕಾರ್ಜುನ ಮಠದ (ಮೊ:98866 35499) ಮತ್ತು ಶಿಗ್ಗಾವಿ ತಾಲೂಕ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಹೆಚ್ಚುವರಿ ನೋಡಲ್ ಅಧಿಕಾರಿಯಾಗಿ ಜಿಲ್ಲಾ ಕೈಗಾರಿಕಾ ಕೇಂದ್ರದ ಸಹಾಯಕ ನಿರ್ದೇಶಕ ವಿನಾಯಕ ಜೋಷಿ (ಮೊ:94488 26871) ಅವರನ್ನು ನೇಮಕ ಮಾಡಲಾಗಿದೆ.

ಹಾನಗಲ್ ತಾಲ್ಲೂಕಿಗೆ ಜಿಲ್ಲಾ ಕೌಶಲಾಭಿವೃದ್ಧಿ ಅಧಿಕಾರಿ ಸುಭಾಸಗೌಡ್ರ (ಮೊ:99165 65361) ಮತ್ತು ಹಾನಲ್ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಹೆಚ್ಚುವರಿ ನೋಡಲ್ ಅಧಿಕಾರಿಯಾಗಿ ಪಶುಪಾಲನೆ ಮತ್ತು ಪಶು ವೈದ್ಯ ಸೇವೆಯ ಸಹಾಯಕ ನಿರ್ದೇಶಕ ರಾಜು ಕೂಲೇರ (ಮೊ:7760627272) ಅವರನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.