ADVERTISEMENT

ಪರೀಕ್ಷಾ ಭಯ ನಿವಾರಣೆಗೆ ವಿಶೇಷ ಅರಿವು ಕಾರ್ಯಕ್ರಮ: ಶಾಸಕ ಪ್ರಕಾಶ ಕೋಳಿವಾಡ

​ಪ್ರಜಾವಾಣಿ ವಾರ್ತೆ
Published 29 ಡಿಸೆಂಬರ್ 2025, 3:09 IST
Last Updated 29 ಡಿಸೆಂಬರ್ 2025, 3:09 IST
ರಾಣೆಬೆನ್ನೂರು ತಾಲ್ಲೂಕಿನ ಕಮದೋಡ ಗ್ರಾಮದ ರೇನಬೋ ಸ್ಕೂಲಿನಲ್ಲಿ ಪರೀಕ್ಷಾ ಭಯ ನಿವಾರಣೆ ವಿಶೇಷ ಅರಿವು ಕಾರ್ಯಕ್ರಮವನ್ನು ಶಾಸಕ ಪ್ರಕಾಶ ಕೋಳಿವಾಡ ಉದ್ಘಾಟಿಸಿದರು.
ರಾಣೆಬೆನ್ನೂರು ತಾಲ್ಲೂಕಿನ ಕಮದೋಡ ಗ್ರಾಮದ ರೇನಬೋ ಸ್ಕೂಲಿನಲ್ಲಿ ಪರೀಕ್ಷಾ ಭಯ ನಿವಾರಣೆ ವಿಶೇಷ ಅರಿವು ಕಾರ್ಯಕ್ರಮವನ್ನು ಶಾಸಕ ಪ್ರಕಾಶ ಕೋಳಿವಾಡ ಉದ್ಘಾಟಿಸಿದರು.   

ರಾಣೆಬೆನ್ನೂರು: ಯಾವುದೇ ಆತಂಕ, ಭಯ ಹಾಗೂ ಒತ್ತಡಕ್ಕೆ ಒಳಗಾಗದೆ ಪ್ರಾಮಾಣಿಕ ಪ್ರಯತ್ನ ಮತ್ತು ನಿರಂತರ ಪರಿಶ್ರಮದಿಂದ ಖಂಡಿತ ಉತ್ತಮವಾದ ಫಲಿತಾಂಶ ಪಡೆಯಬಹುದು. ಒತ್ತಡಕ್ಕೆ ಒಳಗಾಗದೇ ಸುಲಭವಾಗಿ ಅಭ್ಯಾಸ ಮಾಡುವ ವಿಧಾನ ಕಲಿತರೆ ಪರೀಕ್ಷೆಯನ್ನು ಹಬ್ಬದಂತೆ ಸಂಭ್ರಮಿಸಬಹುದು ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.

ತಾಲ್ಲೂಕಿನ ಗ್ರಾಮದ ರೇನಬೋ ಸ್ಕೂಲಿನಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ರೇನಬೋ ಪಿ.ಯು ಕಾಲೇಜು ಆಶ್ರಯದಲ್ಲಿ ಈಚೆಗೆ ಪರೀಕ್ಷಾ ಭಯ ನಿವಾರಣೆ ವಿಶೇಷ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳಿಗೆ ಕೌಶಲ್ಯದ ಮಹತ್ವವನ್ನು ಸರಿಯಾಗಿ ಬಳಸಿಕೊಳ್ಳುವ ಅಗತ್ಯವನ್ನು ವಿವರಿಸಿ, ಕೇವಲ ಅಂಕಗಳಿಗೆ ಮಾತ್ರ ಸೀಮಿತವಾಗದೇ, ಕೌಶಲಗಳ ಅಭಿವೃದ್ಧಿ ಮೂಲಕ ಜೀವನದಲ್ಲಿ ಯಶಸ್ಸು ಸಾಧಿಸಬೇಕು ಎಂದರು.

ಸಂಪನ್ಮೂಲ ವ್ಯಕ್ತಿ ರಾಮ ಮೋಹನ್ ರಾವ್ ಅವರು ಮಾತನಾಡಿ, ಪರೀಕ್ಷೆ ಹತ್ತಿರವಾಗುತ್ತಿರುವ ಸಮಯದಲ್ಲಿ ಬಹಳ ಮುಖ್ಯವಾಗಿ ಸೆಲ್ ಫೋನ್ ಬಳಕೆ ಕಡಿಮೆಯಾಗಬೇಕು ಎಂದರು. ಕ್ಷೇತ್ರ ಶಿಕ್ಷಣಾಧಿಕಾರಿ ಶ್ಯಾಮಸುಂದರ ಅಡಿಗ ಅವರು ಮಾತನಾಡಿದರು.

ADVERTISEMENT

ಸಂಸ್ಥೆಯ ಅಧ್ಯಕ್ಷ ಸುರೇಶ ಸಿ.ಟಿ, ಉಪಾಧ್ಯಕ್ಷೆ ಲಲಿತಾ ಸುರೇಶ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವಿರೇಶ ಮೋಟಗಿ, ಸದಸ್ಯ ಗುರುರಾಜ ಕಂಬಳಿ, ಮುಖ್ಯ ಶಿಕ್ಷಕ ಸಂಗಮೇಶ ಹಾಗೂ ಸಂಸ್ಥೆಯ ಆಡಳಿತ ಮಂಡಳಿ ನಿರ್ದೇಶಕರು ಹಾಗೂ ತಾಲೂಕಿನ ವಿವಿಧ ಪ್ರೌಢ ಶಾಲೆಗಳ 10 ನೇ ತರಗತಿಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.