ಹಾವೇರಿ: ತಾಲ್ಲೂಕಿನ ಕಬ್ಬೂರ ಗ್ರಾಮದ ವೀರಭದ್ರೇಶ್ವರ ದೇವಸ್ಥಾನ ಬಳಿಯ ಅಂಗನವಾಡಿಯಲ್ಲಿ ಅವಧಿ ಮೀರಿದ ಹಾಲಿನ ಪುಡಿ ಪೊಟ್ಟಣವನ್ನು ಮಕ್ಕಳಿಗೆ ವಿತರಿಸಿರುವ ಆರೋಪ ವ್ಯಕ್ತವಾಗಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಒತ್ತಾಯಿಸುತ್ತಿದ್ದಾರೆ.
ರಾಜ್ಯ ಸರ್ಕಾರದ ಕ್ಷೀರ ಭಾಗ್ಯ ಯೋಜನೆಯಡಿ ಹಾವೇರಿ ಹಾಲು ಒಕ್ಕೂಟದಿಂದ (ಹಾವೆಮುಲ್)ಅಂಗನವಾಡಿ ಮೂಲಕ ಬಾಣಂತಿಯರಿಗೆ ಹಾಗೂ ಗರ್ಭಿಣಿಯರಿಗೆ ನಂದಿನಿ ಹಾಲಿನ ಪುಡಿ ಪೊಟ್ಟಣಗಳನ್ನು ವಿತರಿಸಲಾಗುತ್ತಿದೆ. ಕಬ್ಬೂರಿನ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ, ಅವಧಿ ಮೀರಿದ ಪುಡಿ ಪೂರೈಸಿರುವುದನ್ನು ಗ್ರಾಮಸ್ಥರೇ ಪತ್ತೆ ಮಾಡಿದ್ದಾರೆ.
‘2025ರ ಜನವರಿ 30ರಂದು ತಯಾರಿಸಿದ್ದ ಪೊಟ್ಟಣದ ಅವಧಿ ಜೂನ್ 14ರಂದು ಮುಗಿದಿದೆ. ಇದೇ ಪೊಟ್ಟಣವನ್ನು ನಮ್ಮೂರಿನ ಅಂಗನವಾಡಿ ಮಕ್ಕಳಿಗೆ ನೀಡಲಾಗಿದೆ. ಇದರಲ್ಲಿ ಯಾವ ಲೋಪವಿದೆ ಎಂಬುದನ್ನು ತನಿಖೆ ಮೂಲಕ ಪತ್ತೆ ಮಾಡಬೇಕು. ಇಂಥ ಘಟನೆ ಮರುಕಳಿಸದಂತೆ ಕ್ರಮ ಕೈಗೊಳ್ಳಬೇಕು’ ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.