ಹಾವೇರಿ: ಉತ್ತಮ ದರ ಸಿಗದ ಕಾರಣ ತಾಲ್ಲೂಕಿನ ಹನುಮನಹಳ್ಳಿ ಗ್ರಾಮದ ರೈತನೊಬ್ಬ ತನ್ನ ಜಮೀನಿನಲ್ಲಿ ಬೆಳೆದಿದ್ದ ಮೆಣಸಿನಕಾಯಿ ಬೆಳೆಯನ್ನು ನಾಶಪಡಿಸಿದ್ದಾನೆ.
ಹನುಮನಹಳ್ಳಿ ಗ್ರಾಮದ ಸುರೇಶ ಪೂಜಾರ ಅವರು 2 ಎಕರೆ ಜಮೀನಿನಲ್ಲಿ ಸಾವಿರಾರು ರೂಪಾಯಿ ಖರ್ಚು ಮಾಡಿ ಮೆಣಸಿನಕಾಯಿ ಬೆಳೆದಿದ್ದರು. ದೇಶದಾದ್ಯಂತ ಲಾಕ್‌ಡೌನಿಂದಾಗಿ ಮೆಣಸಿನಕಾಯಿಗೆ ಉತ್ತಮ ಬೆಲೆ ಸಿಗಲಿಲ್ಲ. ಕ್ವಿಂಟಲ್‌ಗೆ ₹800 ದರವಿದ್ದು, ಮೆಣಸಿನಕಾಯಿ ಬಿಡಿಸಲು ಕೂಲಿ ಕಾರ್ಮಿಕರಿಗೆ ಕೊಡುವ ಖರ್ಚೂ ಹುಟ್ಟುವುದಿಲ್ಲ ಎಂದು ಬೆಳೆಯನ್ನು ಬೇಸರದಿಂದ ನಾಶ ಮಾಡಿದ್ದಾರೆ.
ಹಸಿಮೆಣಸಿನಕಾಯಿ ಬೆಳೆದ ರೈತರಿಗೆ ಸರ್ಕಾರ ₹15 ಸಾವಿರ ಪರಿಹಾರ ಘೋಷಣೆ ಮಾಡಿದೆ. ಆದರೆ ಇನ್ನೂ ರೈತರ ಖಾತೆಗೆ ಜಮೆಯಾಗಿಲ್ಲ.ಇಂತಹ ಸಂದಿಗ್ಧ ಪರಿಸ್ಥಿತಿಯನ್ನು ಎದುರಿಸಲಾಗದೇ ಮೆಣಸಿನಕಾಯಿ ಬೆಳೆಯನ್ನು ಸಂಪೂರ್ಣವಾಗಿ ಟ್ರ್ಯಾಕ್ಟರ್‌ನಿಂದ ರೂಟರ್ ಹೊಡೆದು ಹರಗಿಸಿದ್ದಾರೆ.
ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಪರಿಹಾರ ನೀಡಬೇಕೆಂದು ರೈತ ಸುರೇಶಪ್ಪ ಪೂಜಾರ ಒತ್ತಾಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.