ಅಕ್ಕಿಆಲೂರ: ಹಾನಗಲ್ ತಾಲ್ಲೂಕಿನ ಅರಳೇಶ್ವರ ಗ್ರಾಮದ ರೈತ ರವಿ ಹನುಮಂತಪ್ಪ ಕನ್ನೇಶ್ವರ (55) ಚಿಕಿತ್ಸೆಗೆ ಸ್ಪಂದಿಸದೆ ಕಿಮ್ಸ್‌ನಲ್ಲಿ ಮೃತಪಟ್ಟಿದ್ದಾರೆ.
ಕೃಷಿಗಾಗಿ ಮಾಡಿದ ಸಾಲ ತೀರಿಸುವುದು ಹೇಗೆಂದು ಆತಂಕಕ್ಕೆ ಒಳಗಾಗಿ ಐದು ದಿನಗಳ ಹಿಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಹಾನಗಲ್ ತಾಲ್ಲೂಕು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್‌ಗೆ ದಾಖಲಿಸಲಾಗಿತ್ತು.
ಸೋಮವಾರ ರಾತ್ರಿ ಮೃತಪಟ್ಟಿದ್ದಾರೆ. ಹಾನಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.