ADVERTISEMENT

ಬನ್ನಿಹಳ್ಳಿ : ರೈತ ಆತ್ಮಹತ್ಯೆ 

​ಪ್ರಜಾವಾಣಿ ವಾರ್ತೆ
Published 20 ಡಿಸೆಂಬರ್ 2025, 2:21 IST
Last Updated 20 ಡಿಸೆಂಬರ್ 2025, 2:21 IST
<div class="paragraphs"><p>ಸಾವು</p></div>

ಸಾವು

   

(ಪ್ರಾತಿನಿಧಿಕ ಚಿತ್ರ)

ಬ್ಯಾಡಗಿ: ವಿಷ ಸೇವಿಸಿ ಡಿ.14ರಂದು ಆಸ್ಪತ್ರೆಗೆ ದಾಖಲಾಗಿದ್ದ ರೈತನೊಬ್ಬ ಚಿಕಿತ್ಸೆಗೆ ಸ್ಪಂದಿಸದೆ ಡಿ.17ರಂದು ರಾತ್ರಿ ಹುಬ್ಬಳ್ಳಿ ಕಿಮ್ಸ್‌ನಲ್ಲಿ ಮೃತಪಟ್ಟಿದ್ದಾರೆ.

ADVERTISEMENT

ತಾಲ್ಲೂಕಿನ ಬನ್ನಿಹಳ್ಳಿ ಗ್ರಾಮದ ಈರಪ್ಪ ಬಸಪ್ಪ ರಾಗಿ (47) ಮೃತ ರೈತ. ಕಳೆದ ವರ್ಷ ಸಮರ್ಪಕ ಮಳೆಯಾಗದೆ ಬೆಳ ಹಾನಿಯಾಗಿತ್ತು. ಇದರಿಂದ ಬೇಸರಗೊಂಡ ಅವರು, ಡಿ.14ರಂದು ದನದ ಕೊಟ್ಟಿಗೆಯಲ್ಲಿ ವಿಷ ಸೇವಿಸಿದ್ದರು. ಚಿಕಿತ್ಸೆಗಾಗಿ ಹಾವೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಹೊಲಕ್ಕೆ ಬಿತ್ತನೆ ಮಾಡಿದ ಭತ್ತಕ್ಕಾಗಿ ಖಾಸಗಿ ಹಣಕಾಸು ಸಂಸ್ಥೆ, ಬ್ಯಾಂಕ್‌ ಹಾಗೂ ಕೈಗಡವಾಗಿ ಸಾಲ ಮಾಡಿಕೊಂಡಿದ್ದರು ಎಂದು ಮೃತನ ತಾಯಿ ಸರೋಜಮ್ಮ ನೀಡಿದ ದೂರಿನಲ್ಲಿ ಪ್ರಸ್ತಾಪಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾಗಿನೆಲೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.