
ಪ್ರಜಾವಾಣಿ ವಾರ್ತೆರಟ್ಟೀಹಳ್ಳಿ: ತಾಲ್ಲೂಕಿನ ಕುಡುಪಲಿ ಗ್ರಾಮದ ರೈತ ಖಂಡಪ್ಪ ಹನುಮಂತಪ್ಪ ಚಲವಾದಿ ಉರ್ಫ್ ವಾಲಗದ (73) ಜಮೀನಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬಿತ್ತನೆಗೆಂದು ಕೆ.ವಿ.ಜಿ. ಬ್ಯಾಂಕಿನಿಂದ ₹2 ಲಕ್ಷ ಸಾಲ ಪಡೆದಿದ್ದರು. ಈ ವರ್ಷ ಮಳೆ ಬಾರದೇ ಬೆಳೆ ಕೈಕೊಟ್ಟಿದ್ದರಿಂದ ಮನನೊಂದು ವಿಷ ಸೇವಿಸಿದ್ದರು. ಹಾವೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆಗೆ ಸ್ಪಂದಿಸದೇ ಭಾನುವಾರ ಮೃತಪಟ್ಟರು.
ರಟ್ಟೀಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.