ADVERTISEMENT

ಬ್ಯಾಡಗಿ: ರೈತ ಸಾವು

​ಪ್ರಜಾವಾಣಿ ವಾರ್ತೆ
Published 18 ಆಗಸ್ಟ್ 2024, 16:16 IST
Last Updated 18 ಆಗಸ್ಟ್ 2024, 16:16 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಬ್ಯಾಡಗಿ: ಹೊಲದಲ್ಲಿ ಕೆಲಸ ಮಾಡುವಾಗ ಕಾಲು ಜಾರಿ ಬಿದ್ದಿದ್ದರಿಂದ ತಲೆಗೆ ತೀವ್ರವಾಗಿ ಗಾಯವಾಗಿದ್ದರಿಂದ ಹುಬ್ಬಳ್ಳಿ ಕಿಮ್ಸ್‌ಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಸ್ಪಂದಿಸದೆ ತಾಲ್ಲೂಕಿನ ಮಾಸಣಗಿ ಗ್ರಾಮದ ರೈತ ರುದ್ರಪ್ಪ ಸದಾಶಿವಪ್ಪ ಮುಳಗುಂದ (57) ಶನಿವಾರ ಮೃತಪಟ್ಟಿದ್ದಾರೆ.

ಆ.4ರಂದು ಮಧ್ಯಾಹ್ನ ಹೊಲದಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿರುವಾಗ ಕಾಲು ಜಾರಿ ಬಿದ್ದಿದ್ದರು. ತಕ್ಷಣ ಗ್ರಾಮದ ವೈದ್ಯರಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ನಂತರ ಹಾವೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್‌ಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ಪೊಲೀಸ್‌ರು ತಿಳಿಸಿದ್ದಾರೆ. ಬ್ಯಾಡಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.