ADVERTISEMENT

ರಾಣೆಬೆನ್ನೂರು: ಅನಧಿಕೃತ ನಿರ್ಮಾಣ ತೆರವಿಗೆ ಆಗ್ರಹ

ಬಿದಿರಿನ ತಟ್ಟಿಗಳನ್ನು ತೆರವುಗೊಳಿಸಲು ರೈತರ ಒತ್ತಾಯ

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2020, 2:24 IST
Last Updated 22 ಸೆಪ್ಟೆಂಬರ್ 2020, 2:24 IST
ರಾಣೆಬೆನ್ನೂರಿನ ಎಪಿಎಂಸಿ ಮಾರುಕಟ್ಟೆಯಲ್ಲಿ ರೈತರಿಗಾಗಿ ಮೀಸಲಿಟ್ಟ ಜಾಗದಲ್ಲಿ ವ್ಯಾಪಾರಸ್ಥರು ಅನಧಿಕೃತವಾಗಿ ಬಿದಿರಿನ ತಟ್ಟಿಗಳನ್ನು ಕಟ್ಟಿಕೊಂಡು ತೆರೆದಿರುವ ಅಂಗಡಿ ತೆರವುಗೋಲಿಸುವಂತೆ ಎಪಿಎಂಸಿ ಅಧ್ಯಕ್ಷ ಬಸವರಾಜಪ್ಪ ಸವಣೂರು ಅವರಿಗೆ ಮನವಿ ಸಲ್ಲಿಸಲಾಯಿತು
ರಾಣೆಬೆನ್ನೂರಿನ ಎಪಿಎಂಸಿ ಮಾರುಕಟ್ಟೆಯಲ್ಲಿ ರೈತರಿಗಾಗಿ ಮೀಸಲಿಟ್ಟ ಜಾಗದಲ್ಲಿ ವ್ಯಾಪಾರಸ್ಥರು ಅನಧಿಕೃತವಾಗಿ ಬಿದಿರಿನ ತಟ್ಟಿಗಳನ್ನು ಕಟ್ಟಿಕೊಂಡು ತೆರೆದಿರುವ ಅಂಗಡಿ ತೆರವುಗೋಲಿಸುವಂತೆ ಎಪಿಎಂಸಿ ಅಧ್ಯಕ್ಷ ಬಸವರಾಜಪ್ಪ ಸವಣೂರು ಅವರಿಗೆ ಮನವಿ ಸಲ್ಲಿಸಲಾಯಿತು   

ರಾಣೆಬೆನ್ನೂರು: ನಗರದ ಎಪಿಎಂಸಿ ಮಾರುಕಟ್ಟೆ ಪ್ರಾಂಗಣದಲ್ಲಿ ವೀಳ್ಯೆದೆಲೆ, ಈರುಳ್ಳಿ ಹಾಗೂ ಬೆಳ್ಳುಳ್ಳಿ ಮಾರುಕಟ್ಟೆಯಲ್ಲಿ ರೈತರಿಗೆ ಸಂತೆ ಮಾಡಲು ಬಿಟ್ಟಿರುವ ಖುಲ್ಲಾ ಜಾಗದಲ್ಲಿ ವ್ಯಾಪಾರಸ್ಥರು ಅನಧಿಕೃತವಾಗಿ ಸುತ್ತಲೂ ಬಿದಿರಿನ ತಟ್ಟಿಯಿಂದ ಚಪ್ಪರ ಹಾಕಿಕೊಂಡು ವ್ಯಾಪಾರ ವಹಿವಾಟು ಮಾಡುತ್ತಿದ್ದಾರೆ. ಅವುಗಳನ್ನು ತೆರವುಗೊಳಿಸಬೇಕೆಂದು ಆಗ್ರಹಿಸಿ ರೈತರು ಸೋಮವಾರ ಎಪಿಎಂಸಿ ಅಧ್ಯಕ್ಷ ಬಸವರಾಜ ಸವಣೂರ ಅವರಿಗೆ ಮನವಿ ಸಲ್ಲಿಸಿದರು.

ರೈತ ಮುಖಂಡ ಬಿ.ಕೆ. ರಾಜನಹಳ್ಳಿ ಮಾತನಾಡಿ, ಇಲ್ಲಿನ ಎಪಿಎಂಸಿ ಮಾರುಕಟ್ಟೆಗೆ ಒಳಪಟ್ಟು ಹೆಚ್ಚಿನ ವಹಿವಾಟು ಹೊಂದಿರುವ ಮಾರುಕಟ್ಟೆಯಲ್ಲಿ ಪ್ರತಿ ದಿನವೂ ವೀಳ್ಯೆದೆಲೆ, ಈರುಳ್ಳಿ ಮತ್ತು ಬೆಳ್ಳುಳ್ಳಿ ವ್ಯಾಪಾರವು ನಡೆಯುತ್ತದೆ. ಇಲ್ಲಿ ವ್ಯಾಪಾರಸ್ಥರು ತಮ್ಮ ವ್ಯಾಪಾರಕ್ಕೆ ಅನುಕೂಲವಾಗುವ ರೀತಿಯಲ್ಲಿ ಸುತ್ತಲೂ ಬಿದಿರಿನ ತಟ್ಟಿ ಹಾಕಿಕೊಂಡಿದ್ದಾರೆ. ಇದರಿಂದ ಮಾರುಕಟ್ಟೆಗೆ ಬರುವ ರೈತರಿಗೆ ತೊಂದರೆಯಾಗುತ್ತಿದೆ ಎಂದರು.

ಎಪಿಎಂಸಿ ಅಧ್ಯಕ್ಷ ಬಸವರಾಜ ಸವಣೂರ ರೈತರಿಗೆ ಯಾವುದೇ ರೀತಿ ತೊಂದರೆಯಾಗದಂತೆ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.