ADVERTISEMENT

ಬಂದ್‌ಗೆ ಬೆಂಬಲ: ಅಂಗಡಿ ಮುಂಗಟ್ಟು ಬಂದ್‌

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2021, 2:53 IST
Last Updated 28 ಸೆಪ್ಟೆಂಬರ್ 2021, 2:53 IST
ಹಾನಗಲ್‌ನಲ್ಲಿ ಸೋಮವಾರ ರೈತ ಸಂಘದ ಜೊತೆಯಲ್ಲಿ ಕಾಂಗ್ರೆಸ್‌ ಮತ್ತು ವಿವಿಧ ಸಂಘಟನೆಗಳು ಬಂದ್‌ಗೆ ಬೆಂಬಲಿಸಿ ಗಾಂಧಿ ವೃತ್ತದಲ್ಲಿ ತಹಶೀಲ್ದಾರ್‌ ಎರ್ರಿಸ್ವಾಮಿ ಪಿ.ಎಸ್‌ ಅವರಿಗೆ ಮನವಿಪತ್ರ ಸಲ್ಲಿಸಿದವು
ಹಾನಗಲ್‌ನಲ್ಲಿ ಸೋಮವಾರ ರೈತ ಸಂಘದ ಜೊತೆಯಲ್ಲಿ ಕಾಂಗ್ರೆಸ್‌ ಮತ್ತು ವಿವಿಧ ಸಂಘಟನೆಗಳು ಬಂದ್‌ಗೆ ಬೆಂಬಲಿಸಿ ಗಾಂಧಿ ವೃತ್ತದಲ್ಲಿ ತಹಶೀಲ್ದಾರ್‌ ಎರ್ರಿಸ್ವಾಮಿ ಪಿ.ಎಸ್‌ ಅವರಿಗೆ ಮನವಿಪತ್ರ ಸಲ್ಲಿಸಿದವು   

ಹಾನಗಲ್‌: ಭಾರತ ಬಂದ್‌ ಬೆಂಬಲಿಸಿ ಅಂಗಡಿ ಮುಂಗಟ್ಟು ಬಂದ್‌ ಮಾಡುವಂತೆ ರೈತ ಸಂಘ ಮಾಡಿದ ಮನವಿಗೆ ವ್ಯಾಪಾರಿಗಳು ಸ್ಪಂದಿಸಿದರು.

ರೈತ ಸಂಘದಿಂದ ಪ್ರತಿಭಟನಾ ಮೆರವಣಿಗೆ ನಡೆಯಿತು. ಕಾಂಗ್ರೆಸ್ ಕಾರ್ಯಕರ್ತರು ಮತ್ತು ವಿವಿಧ ಸಂಘಟನೆಗಳ ಸದಸ್ಯರು ಭಾಗವಹಿಸಿದ್ದರು. ಕುಮಾರೇಶ್ವರ ವೃತ್ತದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ಗಾಂಧಿ ವೃತ್ತದಲ್ಲಿ ಸಭೆಯಾಗಿ ಮಾರ್ಪಟ್ಟಿತ್ತು. ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್‌ ಎರ್ರಿಸ್ವಾಮಿ ಪಿ.ಎಸ್‌ ಅವರಿಗೆ ಮನವಿಪತ್ರ ಸಲ್ಲಿಸಲಾಯಿತು.

ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಮರಿಗೌಡ ಪಾಟೀಲ ಮಾತನಾಡಿ, ದೇಶದ ಬೆನ್ನೆಲುಬು ಎಂದು ರೈತರನ್ನು ಕರೆಯುವ ಆಳುವ ಪಕ್ಷಗಳು ರೈತರ ಹಿತಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿವೆ. ಮೂರು ಕರಾಳ ಕಾಯ್ದೆ ರೈತಾಪಿ ವರ್ಗಕ್ಕೆ ಗಾಯದ ಮೇಲೆ ಬರೆ ಎಳೆದಂತೆ ಜಾರಿಗೊಳ್ಳುತ್ತಿವೆ ಎಂದು ಹರಿಹಾಯ್ದರು.

ADVERTISEMENT

ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ ಮಾನೆ, ಮಾಜಿ ಸಚಿವ ಮನೋಹರ ತಹಸೀಲ್ದಾರ್, ವಿವಿಧ ಸಂಘಟನೆ ಪ್ರಮುಖರಾದ ವಿನಾಯಕ ಕುರುಬರ, ಎಂ.ಎಸ್.ಕೊತಂಬರಿ ಮಾತನಾಡಿದರು.

ರೈತ ಸಂಘದ ಜಿಲ್ಲಾ ಘಟಕದ ಉಪಾಧ್ಯಕ್ಷ ಅಡಿವೆಪ್ಪ ಆಲದಕಟ್ಟಿ, ತಾಲ್ಲೂಕು ಘಟಕದ ಉಪಾಧ್ಯಕ್ಷ ಮಹೇಶ ವಿರುಪಣ್ಣನವರ, ಸೋಮಣ್ಣ ಜಡೆಗೊಂಡರ, ವಾಸುದೇವ ಕಮಾಟಿ, ರುದ್ರಪ್ಪ ಹಣ್ಣಿ, ಚನ್ನಪ್ಪ ಪಾವಲಿ, ಶ್ರೀಕಾಂತ ದುಂಡಣ್ಣನವರ, ಮಾಲತೇಶ ಕಲ್ಲಿಕರೆಣ್ಣನವರ, ಕರಬಸಪ್ಪ ಆಲದಕಟ್ಟಿ, ಅಬ್ದುಲ್ಖಾದರ್ ಮುಲ್ಲಾ, ಎಂ.ಎಂ.ಬಡಗಿ ಇದ್ದರು.

ಕೆಪಿಸಿಸಿ ಕಾರ್ಯದರ್ಶಿ ಪ್ರಕಾಶಗೌಡ ಪಾಟೀಲ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಆರ್.ಎಸ್.ಪಾಟೀಲ, ಪುಟ್ಟಪ್ಪ ನರೇಗಲ್, ಕಾಂಗ್ರೆಸ್ ಮುಖಂಡರಾದ ರಾಘವೇಂದ್ರ ತಹಸೀಲ್ದಾರ್, ನಾಗಪ್ಪ ಸವದತ್ತಿ, ಯಾಸೀರ್‌ಖಾನ್ ಪಠಾಣ, ಚಂದ್ರಪ್ಪ ಜಾಲಗಾರ, ರಾಮು ಯಳ್ಳೂರ, ಟಾಕನಗೌಡ ಪಾಟೀಲ, ವಿಜಯಕುಮಾರ ದೊಡ್ಡಮನಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.