ADVERTISEMENT

ಸ್ವಾತಂತ್ರ್ಯ ಹೋರಾಟಗಾರರಿಗೆ ಸನ್ಮಾನ ಫೆ.14ಕ್ಕೆ

​ಪ್ರಜಾವಾಣಿ ವಾರ್ತೆ
Published 11 ಫೆಬ್ರುವರಿ 2021, 16:08 IST
Last Updated 11 ಫೆಬ್ರುವರಿ 2021, 16:08 IST
ಪ್ರಾತಿನಿಧಿಕ ಚಿತ್ರ 
ಪ್ರಾತಿನಿಧಿಕ ಚಿತ್ರ    

ಹಾವೇರಿ: ಕರ್ನಾಟಕ ರಾಜ್ಯ ಸ್ವಾತಂತ್ರ್ಯ ಹೋರಾಟಗಾರರ ಹಾಗೂ ಉತ್ತರಾಧಿಕಾರಿಗಳ ಸಂಘ ಮತ್ತು ಬ್ಯಾಡಗಿಯ ಷಡಕ್ಷರಪ್ಪ ರುದ್ರಪ್ಪ ಮಹಾರಾಜಪೇಟ ಪ್ರತಿಷ್ಠಾನದ ಆಶ್ರಯದಲ್ಲಿ ಸ್ವಾತಂತ್ರ್ಯ ಹೋರಾಟಗಾರರಿಗೆ ಸನ್ಮಾನ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಫೆ.14ರಂದು ಬೆಳಿಗ್ಗೆ 10 ಗಂಟೆಗೆ ಮೈಲಾರ ಮಹದೇವಪ್ಪನವರ ಸ್ಮಾರಕ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ಷಡಕ್ಷರಪ್ಪ ರುದ್ರಪ್ಪ ಮಹಾರಾಜಪೇಟ ಮತ್ತು ಪಾರ್ವತಮ್ಮ ಮಹಾರಾಜಪೇಟ ಇವರ 7ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಏಕಕಾಲಕ್ಕೆ 75 ರಾಷ್ಟ್ರಧ್ವಜಗಳ ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಲಾಗುವುದು. ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಸಂಸದ ಶಿವಕುಮಾರ ಉದಾಸಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಶಾಸಕ ನೆಹರು ಓಲೇಕಾರ ಅಧ್ಯಕ್ಷತೆ ವಹಿಸಲಿದ್ದಾರೆ.

ಮಧ್ಯಾಹ್ನ 3.30 ಗಂಟೆಗೆ ಸಮಾರೋಪ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಹಮ್ಮಿಕೊಂಡಿದ್ದು, ರಟ್ಟಿಹಳ್ಳಿಯ ಕಬ್ಬಿನಕಂತಿಮಠದ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ, ಹೊಸಮಠದ ಬಸವ ಶಾಂತಲಿಂಗ ಸ್ವಾಮೀಜಿ, ರಾಣೆಬೆನ್ನೂರಿನ ಸಿದ್ಧಾರೂಢಮಠದ ಮರುಳ ಶಂಕರಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಅಧ್ಯಕ್ಷತೆ ವಹಿಸಲಿದ್ದಾರೆ.

ADVERTISEMENT

ಷಡಕ್ಷರಪ್ಪ ರುದ್ರಪ್ಪ ಮಹಾರಾಜಪೇಟ ಪ್ರಶಸ್ತಿ, ಪಾರ್ವತಮ್ಮ ಮಹಾರಾಜಪೇಟ ಮಹಿಳಾ ಪ್ರಶಸ್ತಿಯನ್ನು ರಾಜ್ಯದ ವಿವಿಧ ಕ್ಷೇತ್ರಗಳ ಸಾಧಕರಿಗೆ ಪ್ರದಾನ ಮಾಡಲಾಗುವುದು ಎಂದು ಸಂಘದ ಅಧ್ಯಕ್ಷ ಡಾ.ಜಗದೀಶ ಎಸ್‌.ಮಹಾರಾಜಪೇಟ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.