ಬ್ಯಾಡಗಿ: ಪಟ್ಟಣದ ಸ್ನೇಹ ಸದನದಲ್ಲಿ ಬುಧವಾರ ಏರ್ಪಡಿಸಿದ್ದ ಕಣ್ಣಿನ ಉಚಿತ ತಪಾಸಣಾ ಶಿಬಿರದಲ್ಲಿ 50 ಜನರನ್ನು ಶಸ್ತ್ರ ಚಿಕಿತ್ಸೆಗೆ ಆಯ್ಕೆ ಮಾಡಲಾಯಿತು ಎಂದು ಶಿವಮೊಗ್ಗದ ಶಂಕರ ಕಣ್ಣಿನ ಆಸ್ಪತ್ರೆಯ ಡಾ.ಸುನಿಲ್ ತಿಳಿಸಿದರು.
ಎಸ್‌ಜೆಜೆಎಂ ಕಲೆ, ಕ್ರೀಡೆ, ಸಾಂಸ್ಕೃತಿಕ ಸೇವಾ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಕಂಚಿ ಕಾಮಕೋಟಿ ಮೆಡಿಕಲ್ ಟ್ರಸ್ಟ್ ಮತ್ತು ಇಲ್ಲಿಯ ತಾಲ್ಲೂಕು ಆಸ್ಪತ್ರೆ ಆಯೋಜಿಸಿದ್ದ ಶಿಬಿರದಲ್ಲಿ 76 ಜನರ ಕಣ್ಣಿನ ತಪಾಸಣೆ ನಡೆಸಲಾಯಿತು.
ಈ ಪೈಕಿ ಉಳಿದವರಿಗೆ ಔಷಧ ನೀಡಿ ಮುಂದಿನ ಶಿಬಿರದಲ್ಲಿ ಮತ್ತೊಮ್ಮೆ ತಪಾಸಣೆ ಮಾಡಿಸಿಕೊಳ್ಳುವಂತೆ ಸೂಚಿಸಲಾಯಿತು. ಶಸ್ತ್ರ ಚಿಕಿತ್ಸೆಗೆ ಆಯ್ಕೆಯಾದವರನ್ನು ಬಸ್ ಮೂಲಕ ಶಿವಮೊಗ್ಗದಲ್ಲಿರುವ ಶಂಕರ ಕಣ್ಣಿನ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಶಸ್ತ್ರಚಿಕಿತ್ಸೆ ಮಾಡಲಾಗುವುದು. ಕಾರಣ ಆರ್ಥಿಕವಾಗಿ ಹಿಂದುಳಿದ ಬಡವರು ಶಿಬಿರದ ಪ್ರಯೋಜನ ಪಡೆದುಕೊಳ್ಳಬೇಕೆಂದು ಅವರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.