ADVERTISEMENT

ಖಾಲಿ ಹುದ್ದೆ ಭರ್ತಿ ಮಾಡಿ: ಎಸ್‌.ವಿ. ಸಂಕನೂರ ಒತ್ತಾಯ

ವಿಧಾನ ಪರಿಷತ್‌ ಸದಸ್ಯ ಎಸ್‌.ವಿ. ಸಂಕನೂರ ಒತ್ತಾಯ

​ಪ್ರಜಾವಾಣಿ ವಾರ್ತೆ
Published 28 ಜೂನ್ 2021, 11:37 IST
Last Updated 28 ಜೂನ್ 2021, 11:37 IST
ಎಸ್‌.ವಿ. ಸಂಕನೂರ, ವಿಧಾನ ಪರಿಷತ್‌ ಸದಸ್ಯ 
ಎಸ್‌.ವಿ. ಸಂಕನೂರ, ವಿಧಾನ ಪರಿಷತ್‌ ಸದಸ್ಯ    

ಹಾವೇರಿ:ರಾಜ್ಯದ ಖಾಸಗಿ ಅನುದಾನಿತ ಪ್ರೌಢ ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ 2015ರ ಪೂರ್ವದಲ್ಲಿ ನಿಧನ, ನಿವೃತ್ತಿ ಹಾಗೂ ರಾಜೀನಾಮೆಯಿಂದ ಖಾಲಿಯಾಗಿರುವ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಬೇಕು ಎಂದುವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಒತ್ತಾಯಿಸಿದ್ದಾರೆ.

ಕೋವಿಡ್‌ ಆರ್ಥಿಕ ಸಂಕಷ್ಟದ ಹಿನ್ನೆಲೆಯಲ್ಲಿ ತಡೆಯಾಜ್ಞೆ ನೀಡಿದ್ದನ್ನು ಹಿಂಪಡೆದು, ನೇಮಕಾತಿ ಪ್ರಕ್ರಿಯೆಯನ್ನು ಪುನಃ ಪ್ರಾರಂಭಿಸುವಂತೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರುಆದೇಶ ಹೊರಡಿಸಬೇಕು ಎಂದು ಮನವಿ ಮಾಡಿದ್ದಾರೆ.

ರಾಜ್ಯದ ಸುಮಾರು 500ಕ್ಕೂ ಹೆಚ್ಚು ಶಾಲೆ– ಕಾಲೇಜುಗಳಲ್ಲಿ ಒಂದು ದಶಕದಿಂದ ವೇತನವಿಲ್ಲದೇ ಖಾಲಿ ಇರುವ ಹುದ್ದೆಗಳಲ್ಲಿ ಆಶಾಭಾವನೆಯಿಂದ ಸಿಬ್ಬಂದಿ ಕೆಲಸ ನಿರ್ವಹಿಸುತ್ತಿದ್ದಾರೆ. ಈ ಸಿಬ್ಬಂದಿ ನೇಮಕಾತಿಗೆ ಅನುಮೋದನೆ ಇಲ್ಲದೆ, ವೇತನವಿಲ್ಲದೇ ಸಾಕಷ್ಟು ಆರ್ಥಿಕ ಸಂಕಷ್ಟದಲ್ಲಿ ಬದುಕನ್ನು ಸಾಗಿಸುತ್ತಿದ್ದಾರೆ. ಹೀಗಾಗಿ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಬೇಕು ಎಂದು ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.