ಹಾವೇರಿ: ತಾಲೂಕಿನ ಕನವಳ್ಳಿ ಗ್ರಾಮದ ಹೊರವೊಲಯದಲ್ಲಿಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಐದು ಎಕರೆಯಲ್ಲಿ ಬೆಳೆಯಲಾಗಿದ್ದ ಮೆಕ್ಕೆಜೋಳ ಮತ್ತು ತೊಗರಿಬೆಳೆ ಸುಟ್ಟು ಕರಕಲಾಗಿವೆ.
ಖ್ವಾಜಾಮೊಹಿದ್ದೀನ್ ಕದರಮಂಡಲಗಿ ಎನ್ನುವ ರೈತ ತನ್ನ ಐದು ಎಕರೆ ಜಮೀನಿನಲ್ಲಿ ಬೆಳೆದಿದ್ದ ಅಂದಾಜು 8 ಟ್ಯಾಕ್ಟರ್‌ನಷ್ಟು ಗೋವಿನಜೋಳ ಹಾಗೂ ತೊಗರಿ ಬೆಳೆ ಆಕಸ್ಮಿಕ ಬೆಂಕಿ ಅವಘಡಲ್ಲಿ ಸಂಪೂರ್ಣ ಸುಟ್ಟು ಹೋಗಿದೆ.ವಿಷಯ ತಿಳಿದ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ತಕ್ಷಣ ಧಾವಿಸಿ, ಬೆಂಕಿ ನಂದಿಸಲು ಕಾರ್ಯಾಚರಣೆ ನಡೆಸಿದರು.
ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ರೈತನಿಗೆ ಸೂಕ್ತ ಪರಿಹಾರ ನೀಡುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಮುಖಂಡ ಮಂಜುನಾಥ ಕದಂ ಆಗ್ರಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.