
ಬ್ಯಾಡಗಿ: ತಾಲ್ಲೂಕಿನ ಸಿದ್ದಾಪುರ ಗ್ರಾಮದ ಬಳಿ 44 ಎಕರೆ (ಬ ಖರಾಬ) ಅರಣ್ಯದಲ್ಲಿರುವ ಮರಗಳನ್ನು ಕಡಿದು ಭೂಮಿಯನ್ನು ಸಾಗುವಳಿ ಮಾಡಲು ಮುಂದಾಗಿರುವ 10 ಜನರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಗ್ರಾಮಸ್ಥರು ಪಟ್ಟಣದ ಅರಣ್ಯ ಇಲಾಖೆ ಸಿಬ್ಬಂದಿಗೆ ಮಂಗಳವಾರ ಮನವಿ ಸಲ್ಲಿಸಿದರು.
ನೇತೃತ್ವ ವಹಿಸಿದ್ದ ಚನ್ನಬಸಪ್ಪ ಮಲ್ಲಾಪೂರ ಮಾತನಾಡಿ, ‘ಅರಣ್ಯ ಇಲಾಖೆಗೆ ಸೇರಿದ ಭೂಮಿಯನ್ನು ಸಾಗುವಳಿ ಮಾಡಲು ಹೊರಟಿರುವ ಕುರಿತು ಗ್ರಾಮ ಆಡಳಿತಾಧಿಕಾರಿಗಳ ಗಮನಕ್ಕೆ ತರಲಾಗಿದೆ. ಅದು ನಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದು ಹೇಳುವ ಮೂಲಕ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ’ ಎಂದು ಆರೋಪಿಸಿದರು.
ಕುಬೇರಪ್ಪ ಕಚವಿ, ಬಸವಂತಪ್ಪ ಹೊಸಮನಿ, ಬಸವರಾಜ ಬಾಳಂಬೀಡ, ಪ್ರಕಾಶ ಕರೆಮ್ಮನವರ, ಶಿವರುದ್ರಪ್ಪ ಮೂಲಿಕೇರಿ, ಶಿವನಗೌಡ ಹುಗ್ಗಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.