ADVERTISEMENT

ಹಾವೇರಿ: ಬಾಲಕರ ವಿದ್ಯಾರ್ಥಿನಿಲಯಕ್ಕೆ ಶಂಕುಸ್ಥಾಪನೆ

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2022, 14:34 IST
Last Updated 6 ಸೆಪ್ಟೆಂಬರ್ 2022, 14:34 IST
ಹಾವೇರಿ ನಗರದ ಸೃಷ್ಟಿ ಬಡಾವಣೆಯಲ್ಲಿ ನೂತನವಾಗಿ ನಿರ್ಮಿಸಲಿರುವ ಡಿ.ದೇವರಾಜ ಅರಸು ಮೆಟ್ರಿಕ್ ನಂತರದ ವೃತ್ತಿಪರ ಬಾಲಕರ ವಿದ್ಯಾರ್ಥಿನಿಲಯದ ಕಟ್ಟಡದ ಶಂಕುಸ್ಥಾಪನೆಯನ್ನು ಶಾಸಕ ನೆಹರು ಓಲೇಕಾರ ನೆರವೇರಿಸಿದರು 
ಹಾವೇರಿ ನಗರದ ಸೃಷ್ಟಿ ಬಡಾವಣೆಯಲ್ಲಿ ನೂತನವಾಗಿ ನಿರ್ಮಿಸಲಿರುವ ಡಿ.ದೇವರಾಜ ಅರಸು ಮೆಟ್ರಿಕ್ ನಂತರದ ವೃತ್ತಿಪರ ಬಾಲಕರ ವಿದ್ಯಾರ್ಥಿನಿಲಯದ ಕಟ್ಟಡದ ಶಂಕುಸ್ಥಾಪನೆಯನ್ನು ಶಾಸಕ ನೆಹರು ಓಲೇಕಾರ ನೆರವೇರಿಸಿದರು    

ಹಾವೇರಿ: ಹಿಂದುಳಿದ ವರ್ಗದ ವೃತ್ತಿಪರ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗೆ ನೆರವಾಗುವ ರೀತಿಯಲ್ಲಿ ಸುಸಜ್ಜಿತ ವಸತಿ ನಿಲಯ ನಿರ್ಮಾಣ ಮಾಡಲಾಗುವುದು ಎಂದು ಶಾಸಕ ನೆಹರು ಓಲೇಕಾರ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಹಾವೇರಿ ನಗರದ ಸೃಷ್ಟಿ ಬಡಾವಣೆಯಲ್ಲಿ ನೂತನವಾಗಿ ನಿರ್ಮಿಸಲಿರುವ ಡಿ.ದೇವರಾಜ ಅರಸು ಮೆಟ್ರಿಕ್ ನಂತರದ ವೃತ್ತಿಪರ ಬಾಲಕರ ವಿದ್ಯಾರ್ಥಿನಿಲಯದ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

ನಾಳೆಯಿಂದ ಕಟ್ಟಡ ಕಾಮಗಾರಿ ಪ್ರಾರಂಭವಾಗಲಿದ್ದು, ಮುಂಬರುವ ಶೈಕ್ಷಣಿಕ ವರ್ಷದಲ್ಲಿ ಕಟ್ಟಡ ಕಾಮಗಾರಿ ಪೂರ್ಣಗೊಳಿಸಿ ಹಸ್ತಾಂತರ ಮಾಡಲಾಗುವುದು. ದೂರದ ಊರಿನಿಂದ ಉನ್ನತ ಶಿಕ್ಷಣಕ್ಕಾಗಿ ನಗರಕ್ಕೆ ಆಗಮಿಸುವ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಚಟುವಟಿಕೆಗೆ ಪೂರಕವಾಗುವ ರೀತಿಯಲ್ಲಿ ₹3.35 ಕೋಟಿ ವೆಚ್ಚದಲ್ಲಿ ವಸತಿ ನಿಲಯವನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದು ಹೇಳಿದರು.

ADVERTISEMENT

ವಸತಿ ನಿಲಯ ಕಟ್ಟಡ ನಿರ್ಮಿಸಲು 15 ಗುಂಟೆ ನಿವೇಶನವನ್ನು ಒದಗಿಸಲಾಗಿದ್ದು, 7.5 ಗುಂಟೆಯಲ್ಲಿ ಕಟ್ಟಡ ನಿರ್ಮಾಣವಾಗಲಿದೆ. ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡು ವಿದ್ಯಾವಂತರಾಗಿ ದೇಶದ ಉನ್ನತ ಹುದ್ದೆಗಳನ್ನು ಅಲಂಕರಿಸುವವರಾಗಬೇಕು ಎಂದು ಹೇಳಿದರು.

ಈ ಕಟ್ಟಡದ ಮಾದರಿಯಲ್ಲೇ ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಯರಿಗೂ ₹3.35 ಕೋಟಿ ವೆಚ್ಚದಲ್ಲಿ ವಸತಿ ನಿಲಯ ನಿರ್ಮಾಣ ಮಾಡಲಾಗುವು. ಈಗಾಗಲೇ ಹಾವೇರಿ ನಗರದಲ್ಲಿ ಜಮೀನು ಗುರುತಿಸಲಾಗಿದೆ. ಶೀಘ್ರದಲ್ಲೇ ಭೂಮಿಪೂಜೆ ನೆರವೇರಿಸಿ ಕಟ್ಟಡ ಕಾಮಗಾರಿ ಆರಂಭಿಸಲಾಗುವುದು ಎಂದು ಹೇಳಿದರು.

ದೇವಗಿರಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೇಖಾ ಗಿರೀಶ್ ಹೊಳಲು, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪ್ರವೀಣ್ ಕೆ.ಎನ್, ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಎಂ.ಬಿ.ರಾಠೋಡ, ಕರ್ನಾಟಕ ಗೃಹ ಮಂಡಳಿ ಎಂಜಿನಿಯರ್ ನಾಗರಾಜ್ ನಂದಿ, ಮುನಿರುದ್ದೀನ್ ಅಹ್ಮದ್, ಆಶ್ರಯ ಸಮಿತಿ ಸದಸ್ಯೆ ಲಲಿತಾ ಗುಂಡೇನಹಳ್ಳಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.