ADVERTISEMENT

ಇಂಧನ ದರ ಏರಿಕೆ: ಹಾವೇರಿಯಲ್ಲಿ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 24 ಜೂನ್ 2020, 13:00 IST
Last Updated 24 ಜೂನ್ 2020, 13:00 IST
ಇಂಧನ ದರ ಏರಿಕೆ ಖಂಡಿಸಿ, ಬಹುಜನ ಸಮಾಜ ಪಕ್ಷದ ಜಿಲ್ಲಾ ಘಟಕದ ಪದಾಧಿಕಾರಿಗಳು ಹಾವೇರಿ ಜಿಲ್ಲಾಧಿಕಾರಿ ಕಚೇರಿಗೆ ಬುಧವಾರ ಮನವಿ ಸಲ್ಲಿಸಿದರು
ಇಂಧನ ದರ ಏರಿಕೆ ಖಂಡಿಸಿ, ಬಹುಜನ ಸಮಾಜ ಪಕ್ಷದ ಜಿಲ್ಲಾ ಘಟಕದ ಪದಾಧಿಕಾರಿಗಳು ಹಾವೇರಿ ಜಿಲ್ಲಾಧಿಕಾರಿ ಕಚೇರಿಗೆ ಬುಧವಾರ ಮನವಿ ಸಲ್ಲಿಸಿದರು   

ಹಾವೇರಿ: ಕೊರೊನಾ ನಿಯಂತ್ರಿಸುವಲ್ಲಿ ಕೇಂದ್ರ ಮತ್ತು ರಾಜ್ಯ ಬಿಜೆಪಿ ನೇತೃತ್ವದ ಸರ್ಕಾರಗಳು ವಿಫಲವಾಗಿವೆ. ಕೂಡಲೇ ಸರ್ಕಾರ ಬಡವರ್ಗದವರಿಗೆ ದೊಡ್ಡ ಮೊತ್ತದ ಪರಿಹಾರ ಪ್ಯಾಕೇಜ್ ಘೋಷಣೆ ಮಾಡಿ ನೇರವಾಗಿ ಅವರ ಖಾತೆಗೆ ಸೇರುವ ವ್ಯವಸ್ಥೆ ಮಾಡಬೇಕು ಎಂದು ಬಹುಜನ ಸಮಾಜ ಪಕ್ಷದ ಜಿಲ್ಲಾ ಘಟಕದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು.

ನಾಲ್ಕು ತಿಂಗಳಿಂದ ಬಡವರು, ಕೂಲಿ ಕಾರ್ಮಿಕರು, ಆಟೊ ಚಾಲಕರು, ಟ್ಯಾಕ್ಸಿ ಚಾಲಕರು, ಕಟ್ಟಡ ಕಾರ್ಮಿಕರು ಹಾಗೂ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಬದುಕು ನಡೆಸುವುದೇ ಕಷ್ಟಕರವಾಗಿದೆ. ಈವರೆಗೆ ಹಲವಾರು ವರ್ಗದವರಿಗೆ ಅಲ್ಪ ಪ್ರಮಾಣದ ಹಣವನ್ನು ಘೋಷಣೆ ಮಾಡಿದರೂ ಅವುಗಳು ಇನ್ನೂ ಪಲಾನುಭವಿಗಳಿಗೆ ಮುಟ್ಟುತ್ತಿಲ್ಲ. ಈ ಮಧ್ಯೆ ಸರ್ಕಾರಗಳು ಪೆಟ್ರೋಲ್, ಡೀಸೆಲ್‌ ಬೆಲೆ ಏರಿಕೆ ಮಾಡುತ್ತಿರುವುದು ಜನವಿರೋಧಿ ನೀತಿಯಾಗಿದೆ. ಕಷ್ಟದ ಕಾಲದಲ್ಲಿ ಜನರ ನೆರವಿಗೆ ಬರಬೇಕಾದ ಸರ್ಕಾರಗಳು ಬಂಡವಾಳಶಾಹಿಗಳ ಕೈಗೊಂಬೆ ನೀತಿಯನ್ನು ಅನುಸರಿಸುತ್ತಿವೆ ಎಂದು ದೂರಿದ್ದಾರೆ.

ಬಿಎಸ್ಪಿ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಅಶೋಕ ಮರೆಣ್ಣನವರ, ಎನ್.ಟಿ ಮಂಜುನಾಥ, ಶಂಭುಲಿಂಗ ಅನಗೋಡಿಮಠ, ಅಬುಲ್ ಖಾದರ, ನಾಗರಾಜ ಅಂಗಡಿ, ಕಲಂದಾರ ಮಲ್ಲಿಗಾರ, ಸುಲೇಮಾನ ದೇವಿಹೊಸೂರ, ಹೊನ್ನಪ್ಪ ಕರೆಮ್ಮನವರ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.