ಹಾನಗಲ್: ಗಣೇಶ ಚತುರ್ಥಿ ನಿಮಿತ್ತ ತಾಲ್ಲೂಕಿನ ಬ್ಯಾಗವಾದಿ ಗ್ರಾಮದಲ್ಲಿ ಜೆಡಿಎಸ್ ವತಿಯಿಂದ ಮಹಿಳೆಯರಿಗೆ ಉಡಿ ತುಂಬುವ ಧಾರ್ಮಿಕ ಸಂಪ್ರದಾಯ ನೆರವೇರಿತು.
ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ರಾಮನಗೌಡ ಪಾಟೀಲ ನೇತೃತ್ವದಲ್ಲಿ ಗ್ರಾಮದ ದುರ್ಗಮ್ಮ ದೇವಸ್ಥಾನದಲ್ಲಿ ನಡೆದ ಸಮಾರಂಭದಲ್ಲಿ ಸುಮಾರು 600 ಮಹಿಳೆಯರಗೆ ಉಡಿ ತುಂಬಲಾಯಿತು.
‘ಹಬ್ಬಗಳು ನಮ್ಮ ಸಂಸ್ಕೃತಿ, ಪರಂಪರೆಯ ಸಂಕೇತ. ಧಾರ್ಮಿ ಆಚರಣೆಗಳು ನಿರಂತರವಾಗಿ ನಡೆಯಬೇಕು. ಈ ನಿಟ್ಟಿನಲ್ಲಿ ಜೆಡಿಎಸ್ ವತಿಯಿಂದ ತಾಲ್ಲೂಕಿನಲ್ಲಿ ಸಾಕಷ್ಟು ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ’ ಎಂದು ಹೇಳಿದರು.
ಜೆಡೆಸ್ ರಾಜ್ಯ ಘಟಕದ ಉಪಾಧ್ಯಕ್ಷ ಸದ್ಧಬಸಪ್ಪ ಯಾದವ, ಜಿಲ್ಲಾ ಘಟಕದ ಅಧ್ಯಕ್ಷ ಮಂಜುನಾಥ ಗೌಡಶಿವಣ್ಣನವರ, ಯುವ ಘಟಕದ ಅಧ್ಯಕ್ಷ ಅಲ್ತಾಪ್ ನಧಾಪ್, ಪದಾಧಿಕಾರಿಗಳಾದ ಶೇಖರಯ್ಯ ಹಿರೇಮಠ, ಮೂಕಪ್ಪ ಪಡೆಪ್ಪನವರ, ಸಲೀಂ ಸಮನಳ್ಳಿ, ಗೌಸ್‌ಮೊದ್ದೀನ್ ಆಲದಕಟ್ಟಿ, ಬಶೆಟ್ಟೆಪ್ಪ ಗುದ್ಲಿಶೆಟ್ಟರ, ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಪ್ರೇಮಾ ಮಾಯಕ್ಕನವರ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.