ADVERTISEMENT

ಹಾನಗಲ್ ಸಾಮೂಹಿಕ ಅತ್ಯಾಚಾರ ಪ್ರಕರಣ: 17 ಆರೋಪಿಗಳ ಜಾಮೀನು ತಿರಸ್ಕೃತ

​ಪ್ರಜಾವಾಣಿ ವಾರ್ತೆ
Published 22 ಮೇ 2024, 5:28 IST
Last Updated 22 ಮೇ 2024, 5:28 IST
   

ಹಾವೇರಿ: ಹಾನಗಲ್‌ ಸಾಮೂಹಿಕ ಅತ್ಯಾಚಾರ ಪ್ರಕರಣದ 17 ಆರೋಪಿಗಳ ಜಾಮೀನು ಅರ್ಜಿಗಳನ್ನು ಹಾವೇರಿ ಜಿಲ್ಲಾ ಹೆಚ್ಚುವರಿ ಸೆಷನ್ಸ್‌ ನ್ಯಾಯಾಲಯದ (ಫಾಸ್ಟ್‌ ಟ್ರ್ಯಾಕ್‌) ನ್ಯಾಯಾಧೀಶರು ತಿರಸ್ಕೃತಗೊಳಿಸಿದ್ದಾರೆ.

ಆರೋಪಿ 8 ಮತ್ತು ಆರೋಪಿ 13 ಈ ಇಬ್ಬರೂ ಹೈಕೋರ್ಟ್‌ನಲ್ಲಿ ಜಾಮೀನು ಅರ್ಜಿ ಸಲ್ಲಿಸಿ, ನಂತರ ಆರೋಪಿಗಳೇ ಅರ್ಜಿಯನ್ನು ವಾಪಸ್‌ ಪಡೆದಿದ್ದರು. ಮತ್ತೆ ಹಾವೇರಿ ಜಿಲ್ಲಾ ಹೆಚ್ಚುವರಿ ಸೆಷನ್ಸ್‌ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದು, ಮೇ 23ಕ್ಕೆ ವಿಚಾರಣೆ ನಡೆಯಲಿದೆ.

ಆರೋಪಿಗಳಿಗೆ ಜಾಮೀನು ನೀಡುವುದನ್ನು ಪಬ್ಲಿಕ್ ಪ್ರಾಸಿಕ್ಯೂಟರ್‌ ಅವರು ಬಲವಾಗಿ ವಿರೋಧಿಸಿದ್ದರು. ಸಂತ್ರಸ್ತೆಯ ಮೇಲೆ ಪ್ರಭಾವ ಬೀರಬಹುದು ಮತ್ತು ಸಾಕ್ಷ್ಯ ನಾಶ ಮಾಡುವ ಸಾಧ್ಯತೆ ಇರುವುದರಿಂದ ಜಾಮೀನು ನೀಡಬಾರದು ಎಂದು ವಾದಿಸಿದ್ದರು.

ADVERTISEMENT

ಮಾರ್ಚ್‌ 7ರಂದು ಹಾನಗಲ್‌ ನ್ಯಾಯಾಲಯಕ್ಕೆ ಪೊಲೀಸರು ಒಟ್ಟು 19 ಆರೋಪಿಗಳ ವಿರುದ್ಧ ಒಂದು ಸಾವಿರ ಪುಟಗಳ ದೋಷಾರೋಪಣ ಪತ್ರವನ್ನು ಸಲ್ಲಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.