ADVERTISEMENT

‘ಜಿಲ್ಲೆಗೆ 6 ಸಾವಿರ ಮೆ.ಟನ್ ಡಿಎಪಿ ನೀಡಿ'

ಕೇಂದ್ರ ಸಚಿವರಿಗೆ ಸಚಿವ ಬಸವರಾಜ ಬೊಮ್ಮಾಯಿ ಮನವಿ

​ಪ್ರಜಾವಾಣಿ ವಾರ್ತೆ
Published 19 ಏಪ್ರಿಲ್ 2021, 14:45 IST
Last Updated 19 ಏಪ್ರಿಲ್ 2021, 14:45 IST
ಬಸವರಾಜ ಬೊಮ್ಮಾಯಿ, ಜಿಲ್ಲಾ ಉಸ್ತುವಾರಿ ಸಚಿವ 
ಬಸವರಾಜ ಬೊಮ್ಮಾಯಿ, ಜಿಲ್ಲಾ ಉಸ್ತುವಾರಿ ಸಚಿವ    

ಹಾವೇರಿ: ಪ್ರಸಕ್ತ ಮುಂಗಾರು ಹಂಗಾಮಿಗೆ ಹಾವೇರಿ ಜಿಲ್ಲೆಗೆ ಅಗತ್ಯವಾಗಿರುವ 6,000 ಮೆಟ್ರಿಕ್ ಟನ್ ಡಿಎಪಿ ರಸಗೊಬ್ಬರವನ್ನು ಪೂರೈಕೆ ಮಾಡುವಂತೆ ಜಿಲ್ಲಾ ಉಸ್ತುವಾರಿಸಚಿವ ಬಸವರಾಜ ಬೊಮ್ಮಾಯಿ ಅವರು ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ. ಸದಾನಂದಗೌಡ ಅವರಿಗೆ ಮನವಿ ಮಾಡಿದ್ದಾರೆ.

ಹಾವೇರಿ ಕೃಷಿ ಪ್ರಧಾನ ಜಿಲ್ಲೆ. ಈ ಬಾರಿಯ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ. ಮುಂಗಾರು ಹಂಗಾಮಿನಲ್ಲಿ ಹಾವೇರಿಗೆ ಈ ಬಾರಿ ಕೇವಲ 2,635 ಮೆಟ್ರಿಕ್ ಟನ್ ಡಿಎಪಿ ಗೊಬ್ಬರ ಹಂಚಿಕೆ ಆಗಿರುತ್ತದೆ. ಬಿತ್ತನೆ ಸಮಯದಲ್ಲಿ ಡಿಎಪಿ ರಸಗೊಬ್ಬರದ ಅವಶ್ಯಕತೆ ಹೆಚ್ಚಾಗಿರುತ್ತದೆ. ಹೀಗಾಗಿ ಜಿಲ್ಲೆಗೆ 40 ಸಾವಿರ ಮೆಟ್ರಿಕ್ ಟನ್ ಡಿಎಪಿ ರಸಗೊಬ್ಬರವನ್ನು ಪೂರೈಕೆ ಮಾಡುವಂತೆ ಪತ್ರದಲ್ಲಿ ಮನವಿ ಮಾಡಿದ್ದಾರೆ.

ನ್ಯಾಷನಲ್ ಫರ್ಟಿಲೈಜರ್ ಸಂಸ್ಥೆಯು ಹೊರದೇಶದಿಂದ ಗುಜರಾತಿನ ಬಿಫಾವ ಬಂದರು ಮೂಲಕ 40,000 ಮೆಟ್ರಿಕ್ ಟನ್ ಡಿಎಪಿ ರಸಗೊಬ್ಬರವನ್ನು ಆಮದು ಮಾಡಿಕೊಂಡಿದೆ. ಇದರಲ್ಲಿ ಹಾವೇರಿ ಜಿಲ್ಲೆಗೆ 6000 ಮೆಟ್ರಿಕ್ ಟನ್ ಗೊಬ್ಬರ ಹಂಚಿಕೆ ಮಾಡುವಂತೆ ನಿರ್ದೇಶನ ನೀಡಬೇಕೆಂದು ಬೊಮ್ಮಾಯಿ ಕೋರಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.