ADVERTISEMENT

ಹಿರೇಕೆರೂರು: ವೈಭವದ ಗಣೇಶ ವಿಸರ್ಜನಾ ಮಹೋತ್ಸವ

​ಪ್ರಜಾವಾಣಿ ವಾರ್ತೆ
Published 4 ಸೆಪ್ಟೆಂಬರ್ 2022, 14:24 IST
Last Updated 4 ಸೆಪ್ಟೆಂಬರ್ 2022, 14:24 IST
ಹಿರೇಕೆರೂರು ಪಟ್ಟಣದಲ್ಲಿ ವಿಶ್ವ ಹಿಂದೂ ಪರಿಷತ್, ಬಜರಂಗದಳವರು ಪ್ರತಿಷ್ಠಾಪಿಸಿರುವ ಗಣೇಶ ಮೂರ್ತಿಯ ಅದ್ಧೂರಿ ಮೆರವಣಿಗೆಯಲ್ಲಿ ಯುವಕರು ಸಂಭ್ರಮಿಸಿದ್ದು ಹೀಗೆ 
ಹಿರೇಕೆರೂರು ಪಟ್ಟಣದಲ್ಲಿ ವಿಶ್ವ ಹಿಂದೂ ಪರಿಷತ್, ಬಜರಂಗದಳವರು ಪ್ರತಿಷ್ಠಾಪಿಸಿರುವ ಗಣೇಶ ಮೂರ್ತಿಯ ಅದ್ಧೂರಿ ಮೆರವಣಿಗೆಯಲ್ಲಿ ಯುವಕರು ಸಂಭ್ರಮಿಸಿದ್ದು ಹೀಗೆ    

ಹಿರೇಕೆರೂರು: ಪಟ್ಟಣದ ಸರ್ವಜ್ಞ ವೃತ್ತದಲ್ಲಿ ವಿಶ್ವ ಹಿಂದೂ ಪರಿಷತ್, ಬಜರಂಗದಳವರು ಪ್ರತಿಷ್ಠಾಪಿಸಿರುವ ಗಣೇಶನನ್ನು ಪ್ರಮುಖ ಬೀದಿಗಳಲ್ಲಿ ಅದ್ಧೂರಿ ಮೆರವಣಿಗೆ ಮುಖಾಂತರ ಭಾನುವಾರ ಬಿಗಿ ಪೊಲೀಸ್ ಬಂದೋಬಸ್ತ್ ನಡುವೆ ಗಣೇಶ ವಿಸರ್ಜನೆಯ ಮೆರವಣಿಗೆ ಶಾಂತಿಯುತವಾಗಿ ನೆರವೇರಿತು.

ಸಂಜೆ 5 ಗಂಟೆಗೆ ಪಟ್ಟಣದ ಸರ್ವಜ್ಞ ವೃತ್ತದ ಮುಂಭಾಗದ ಹೊರಟ ಮೆರವಣಿಗೆ ವಿಶ್ವ ಹಿಂದೂ ಪರಿಷತ್, ಬಜರಂಗದಳವರು ಹಾಗೂ ಗಣೇಶ ಮಂಡಳಿಯ ಪದಾಧಿಕಾರಿಗಳು ಚಾಲನೆ ನೀಡಿದರು. ನಂತರ ಅಲಂಕೃತ ಟ್ರ್ಯಾಕ್ಟರ್‌ನಲ್ಲಿ‘ಹನುಮಂತನ ಎದೆಯಿಂದ ಮೂಡಿ ಬಂದ ರಾಮನ ಅವತಾರದಲ್ಲಿ ಗಣೇಶ’ ಮೂರ್ತಿಯನ್ನು ಇಟ್ಟು ಪೊಲೀಸ್ ಬಂದೋಬಸ್ತ್‌ನಲ್ಲಿ ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು.

ಪ್ರತಿ ವರ್ಷದಂತೆ ಮೆರವಣಿಗೆಯು ತಂಬಾಕದ ನಗರ, ಸರ್ವಜ್ಞ ವೃತ್ತ, ಚೌಡಿಕೂಟ, ದ್ವಾರಬಾಗಿಲು ಮುಖಾಂತರ ಪ್ರಮುಖ ಬೀದಿಗಳಲ್ಲಿ ಸಾಗಿ ಮುನ್ನಡೆಯಿತು. ಮೆರವಣಿಗೆಯಲ್ಲಿ ನಂದಿ, ನರಸಿಂಹ, ಕರಡಿ, ಗಾರುಡಿ ಗೊಂಬೆಗಳು ಸೇರಿದಂತೆ ವಿವಿಧ ವಾದ್ಯ ಮೇಳಗಳು ಗಮನ ಸೆಳೆದವು.

ADVERTISEMENT

ಗಣೇಶನ ವಿಸರ್ಜನೆ ಮೆರವಣಿಗೆಯಲ್ಲಿ ಕೃಷಿ ಸಚಿವ ಬಿ.ಸಿ. ಪಾಟೀಲ ಕೆಂಪು ಧ್ವಜವನ್ನು ಹಿಡಿದು ನೃತ್ಯ ಮಾಡುವ ಮೂಲಕ ಎಲ್ಲರ ಗಮನಸೆಳೆದರು.

ನಿಷೇಧದ ನಡುವೆಯೂ ಡಿ.ಜೆ ಬಳಕೆ
ಗಣೇಶ ವಿಸರ್ಜನೆಯ ಮೆರವಣಿಗೆ ವೇಳೆಯ ಜಿಲ್ಲಾಧಿಕಾರಿಗಳು ಜಿಲ್ಲೆಯಾದ್ಯಂತ ಡಿ.ಜೆ.ಯನ್ನು ನಿಷೇಧ ಮಾಡಿದ್ದಾರೆ. ಆದರೆ ಹಿರೇಕೆರೂರು ಪಟ್ಟಣದಲ್ಲಿ ಡಿ.ಜೆ. ಹಾಕಿಕೊಂಡು, ಹಾಡಿಗೆ ಯುವಕರು ಕುಣಿದು ಕುಪ್ಪಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.