ಹಾವೇರಿ: ರಾಜ್ಯ ಸರ್ಕಾರ ಕೊರೊನಾ ಸೋಂಕು ನಿಯಂತ್ರಿಸಲು ಪ್ರತಿ ಭಾನುವಾರ ಸಂಪೂರ್ಣ ಲಾಕ್ ಡೌನ್ ಜಾರಿಗೊಳಿಸುತ್ತಿದ್ದು, ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಅಂಗಡಿ- ಮಳಿಗೆಗಳು ಮುಚ್ಚಿದ್ದು, ಪ್ರಮುಖ ರಸ್ತೆ ಹಾಗೂ ವೃತ್ತಗಳು ಜನರಿಲ್ಲದೆ ಬಿಕೋ ಎನ್ನುತ್ತಿವೆ.
ಸಾರಿಗೆ ಮತ್ತು ಖಾಸಗಿ ಬಸ್, ಆಟೊ, ಟ್ಯಾಕ್ಸಿ ಸಂಚಾರ ಸಂಪೂರ್ಣ ಬಂದ್ ಆಗಿದೆ.
ಆಂಬುಲೆನ್ಸ್, ಅಗತ್ಯ ಸೇವೆಗಳ ಸರಕು ಸಾಗಣೆ ವಾಹನಗಳು ಮಾತ್ರ ಸಂಚರಿಸುತ್ತಿವೆ. ಅನಗತ್ಯವಾಗಿ ರಸ್ತೆಗಿಳಿದ ಕೆಲವು ವಾಹನ ಸವಾರರಿಗೆ ಪೊಲೀಸರು ದಂಡ ವಿಧಿಸಿದರು.
ತರಕಾರಿ, ಹಾಲು, ಔಷಧ ಮಳಿಗೆಗಳು ಹಾಗೂ ಆಸ್ಪತ್ರೆಗಳು ಎಂದಿನಂತೆ ತೆರೆದಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.