ADVERTISEMENT

ಹಾವೇರಿ | ಪದವೀಧರರ ಕ್ಷೇತ್ರ: 22,160 ಮತದಾರರ ನೋಂದಣಿ

​ಪ್ರಜಾವಾಣಿ ವಾರ್ತೆ
Published 31 ಡಿಸೆಂಬರ್ 2025, 3:16 IST
Last Updated 31 ಡಿಸೆಂಬರ್ 2025, 3:16 IST
   

ಹಾವೇರಿ: ಪದವೀಧರರ ಪಶ್ಚಿಮ ಮತಕ್ಷೇತ್ರಕ್ಕೆ ಸದ್ಯದಲ್ಲೇ ಚುನಾವಣೆ ಘೋಷಣೆಯಾಗಲಿದ್ದು, ಇದಕ್ಕಾಗಿ ಜಿಲ್ಲೆಯಲ್ಲಿ 22,160 ಪದವೀಧರರು ನೋಂದಣಿ ಮಾಡಿಸಿಕೊಂಡಿದ್ದಾರೆ.

ಮತಗಟ್ಟೆಗಳ ವಾರು ಮತದಾರರ ಪಟ್ಟಿಯನ್ನು ಆನ್‌ಲೈನ್ ಹಾಗೂ ಆಪ್‌ಲೈನ್‌ನಲ್ಲಿ ಬಿಡುಗಡೆ ಮಾಡಲಾಗಿದ್ದು, ಅರ್ಹ ಮತದಾರರು ಪರಿಶೀಲಿಸಿಕೊಳ್ಳಬಹುದೆಂದು ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ ತಿಳಿಸಿದ್ದಾರೆ.

‘ಹಾವೇರಿ, ಧಾರವಾಡ, ಗದಗ, ಉತ್ತರ ಕನ್ನಡ ಜಿಲ್ಲೆಗಳನ್ನು ಒಳಗೊಂಡು ಪದವೀಧರರ ಪಶ್ಚಿಮ ಮತಕ್ಷೇತ್ರ ರಚಿಸಲಾಗಿದೆ. ಈ ಮತಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಹಾವೇರಿ ಜಿಲ್ಲೆಯ 13,651 ಪುರುಷರು ಹಾಗೂ 8,209 ಮಹಿಳೆಯರು ತಮ್ಮ ಹೆಸರು ನೋಂದಾಯಿಸಿಕೊಂಡಿದ್ದಾರೆ’ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

ADVERTISEMENT

‘ಬ್ಯಾಡಗಿ ತಾಲ್ಲೂಕಿನಲ್ಲಿ 1988 ಮತದಾರರು ನೋಂದಣಿ ಮಾಡಿಸಿಕೊಂಡಿದ್ದಾರೆ. ಹಾನಗಲ್ ತಾಲ್ಲೂಕಿನಲ್ಲಿ 1966, ಹಾವೇರಿ ತಾಲ್ಲೂಕಿನಲ್ಲಿ 4200, ಹಿರೇಕೆರೂರು ತಾಲ್ಲೂಕಿನಲ್ಲಿ 2016, ರಟ್ಟೀಹಳ್ಳಿಯಲ್ಲಿ 1301, ಸವಣೂರಿನಲ್ಲಿ 1854, ಶಿಗ್ಗಾವಿಯಲ್ಲಿ 2118 ಹಾಗೂ ರಾಣೆಬೆನ್ನೂರಿನಲ್ಲಿ 5740 ಮತದಾರರಿದ್ದಾರೆ’ ಎಂದು ತಿಳಿಸಿದ್ದಾರೆ.

‘ಮತದಾರರ ಅಂತಿಮ ಪಟ್ಟಿಯನ್ನು ಎಲ್ಲ ತಾಲ್ಲೂಕಿನ ತಹಶೀಲ್ದಾರರ ಕಚೇರಿ, ತಾಲ್ಲೂಕು ಪಂಚಾಯತಿ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಗಳಲ್ಲಿ, ಮತಗಟ್ಟೆಗಳಲ್ಲಿ ಮತ್ತು ಜಿಲ್ಲಾಧಿಕಾರಿ–ಜಿಲ್ಲಾ ಚುನಾವಣಾಧಿಕಾರಿ ಕಚೇರಿಯಲ್ಲಿ ಪ್ರಕಟಿಸಲಾಗಿದೆ. ಮತದಾರರು ತಮ್ಮ ಹೆಸರು ಪ್ರಕಟವಾದ ಬಗ್ಗೆ ಪರಿಶೀಲಿಸಿಕೊಳ್ಳಬೇಕು’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.