ADVERTISEMENT

ಹಿರೇಕೆರೂರ: ಮತದಾರರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 9 ಅಕ್ಟೋಬರ್ 2025, 2:32 IST
Last Updated 9 ಅಕ್ಟೋಬರ್ 2025, 2:32 IST
<div class="paragraphs"><p>ಮತದಾರರ ಪಟ್ಟಿ</p></div>

ಮತದಾರರ ಪಟ್ಟಿ

   

– ಎ.ಐ ಚಿತ್ರ

ಹಿರೇಕೆರೂರ: ಪಶ್ಚಿಮ ಪದವೀಧರರ ಮತಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು  ಮತದಾರರರ ನೋಂದಣಿ ನಿಯಮ 1960ರ ಅನ್ವಯ ನಮೂನೆ-18 ಅನ್ನು ಭರ್ತಿ ಮಾಡಿ ಸಲ್ಲಿಸಬೇಕಿದೆ.

ADVERTISEMENT

ನವೆಂಬರ್‌ 6ರೊಳಗೆ ತಾಲ್ಲೂಕಿನ ಸಹಾಯಕ ಮತದಾರರ ನೋಂದಣಾಧಿಕಾರಿ ಹಾಗೂ ನಿಯೋಜಿತ ಅಧಿಕಾರಿಗಳಿಗೆ ಅರ್ಜಿ ತಲುಪಿಸಬೇಕು.

ಎರಡನೇ ಅನುಸೂಚಿ ನಮೂನೆ 18 ಮತ್ತು ಮೂರನೇ ಅನುಸೂಚಿ ನಮೂನೆ, ಪದವೀಧರ ನೌಕರರ ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದಂತೆ ಕಚೇರಿಯ ಗೆಜೆಟೆಡ್ ಮುಖ್ಯಸ್ಥರು ನೀಡಿದ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್‌, ಚಾಲನಾ ಪರವಾನಗಿ, ಭಾರತೀಯ ಪಾಸ್‌ಪೋರ್ಟ್, ರಾಜ್ಯ ಅಥವಾ ಕೇಂದ್ರ ಸರ್ಕಾರದ ಉದ್ಯೋಗಿಗಳಿಗೆ ನೀಡಿದ ಸೇವಾ ಗುರುತಿನ ಚೀಟಿ, ಸಂಸದರು ಅಥವಾ ಶಾಸಕರು ಅಥವಾ ವಿಧಾನ ಪರಿಷತ್ ಸದಸ್ಯರಿಗೆ ನೀಡಿದ ಅಧಿಕೃತ ಗುರುತಿನ ಚೀಟಿ, ಶಿಕ್ಷಣ ಸಂಸ್ಥೆಗಳು ನೀಡಿದ ಸೇವಾ ಗುರುತಿನ ಚೀಟಿ, ಸಕ್ಷಮ ಪ್ರಾಧಿಕಾರದಿಂದ ನೀಡಿದ ದೈಹಿಕ ನ್ಯೂನತೆಯ ಪ್ರಮಾಣಪತ್ರ ಸಲ್ಲಿಸಬಹುದು.

ನವೆಂಬರ್‌ 1ಕ್ಕಿಂತ ಕನಿಷ್ಠ ಮೂರು ವರ್ಷ ಮೊದಲು ಭಾರತದಲ್ಲಿರುವ ಯಾವುದಾದರೊಂದು ವಿಶ್ವವಿದ್ಯಾಲಯದ ಪದವೀಧರ ಆದವರು ಅಥವಾ ತತ್ಸಮಾನ ವಿದ್ಯಾರ್ಹತೆ  ಹೊಂದಿರುವ ಪ್ರತಿಯೊಬ್ಬರೂ ಮತದಾರರರ ಪಟ್ಟಿಯಲ್ಲಿ ಹೆಸರು ಸೇರಿಸಲು ಅರ್ಹರಾಗಿರುತ್ತಾನೆ ಎಂದು ತಾಲ್ಲೂಕಿನ ಸಹಾಯಕ ಮತದಾರರ ನೋಂದಣಾಧಿಕಾರಿಯೂ ಆದ ತಹಶೀಲ್ದಾರ್‌ ಎಂ. ರೇಣುಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.