ADVERTISEMENT

ಶೋಭಾ ಯಾತ್ರೆಗೆ ಅದ್ದೂರಿ ಚಾಲನೆ 

​ಪ್ರಜಾವಾಣಿ ವಾರ್ತೆ
Published 24 ಫೆಬ್ರುವರಿ 2026, 6:47 IST
Last Updated 24 ಫೆಬ್ರುವರಿ 2026, 6:47 IST
ಬ್ಯಾಡಗಿ ತಾಲ್ಲೂಕಿನ ಮೋಟೆಬೆನ್ನೂರು ಗ್ರಾಮದಲ್ಲಿ ಹಿಂದೂ ಸಮಾವೇಶದ ಅಂಗವಾಗಿ ಅದ್ದೂರಿ ಶೋಭಾಯಾತ್ರೆ ಜರುಗಿತು 
ಬ್ಯಾಡಗಿ ತಾಲ್ಲೂಕಿನ ಮೋಟೆಬೆನ್ನೂರು ಗ್ರಾಮದಲ್ಲಿ ಹಿಂದೂ ಸಮಾವೇಶದ ಅಂಗವಾಗಿ ಅದ್ದೂರಿ ಶೋಭಾಯಾತ್ರೆ ಜರುಗಿತು    

ಬ್ಯಾಡಗಿ: ‘ಹಿಂದೂ ಸಮ್ಮೇಳನವು ಧರ್ಮ ಜಾಗೃತಿ, ಸಂಕಲ್ಪ, ಸಂಸ್ಕೃತಿ ರಕ್ಷಣೆಯ ಪ್ರತೀಕ ಹಾಗೂ ಏಕತೆಯ ಸಂಕೇತವಾಗಿದೆ’ ಎಂದು ಹಿಂದೂ ಸಮ್ಮೇಳನ ಸಮಿತಿಯ ಗ್ರಾಮ ಘಟಕದ ಅಧ್ಯಕ್ಷ ಮಲ್ಲಯ್ಯ ಹಿರೇಮಠ ಹೇಳಿದರು.

ತಾಲ್ಲೂಕಿನ ಮೋಟೆಬೆನ್ನೂರು ಗ್ರಾಮದಲ್ಲಿ ‘ಭವ್ಯ ಹಿಂದೂ ಸಮಾವೇಶ–2026’ ರ ಅಂಗವಾಗಿ ಸೋಮವಾರ ಹಮ್ಮಿಕೊಂಡಿದ್ದ ಶೋಭಾ ಯಾತ್ರೆಯಲ್ಲಿ ಭಾರತ ಮಾತೆಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಚಾಲನೆ ನೀಡಿ ಮಾತನಾಡಿದರು.

ಅದ್ದೂರಿ ಮೆರವಣೆಗೆ: ಗ್ರಾಮ ಪಂಚಾಯಿತಿ ಆವರಣದಿಂದ ಆರಂಭವಾದ ಶೋಭಾಯಾತ್ರೆಯಲ್ಲಿ ಕೇಸರಿ ಶಾಲುಗಳು ರಾರಾಜಿಸಿದವು. ಹಿಂದುಗಳೆಲ್ಲರೂ ಒಂದು ಎಂಬ ಘೋಷಣೆಗಳೊಂದಿಗೆ ಮೆರವಣಿಗೆಯಲ್ಲಿ ಸಾಗಿದರು. ಮೆರವಣೆಗೆಯಲ್ಲಿ ಕದಮನಹಳ್ಳಿ ಪಶುಪತಿ ಶಿವಾನಂದ ಸ್ವಾಮೀಜಿ, ನೆಗಳೂರು ಹಿರೇಮಠದ ಗುರುಶಾಂತೇಶ್ವರ ಸ್ವಾಮೀಜಿ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ವಿರೂಪಾಕ್ಷಪ್ಪ ಬಳ್ಳಾರಿ, ವಿಜಯಭರತ ಬಳ್ಳಾರಿ, ಶಿವಬಸಪ್ಪ ಕುಳೇನೂರ ಇದ್ದರು. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.