ADVERTISEMENT

ಹಿರೇಕೆರೂರ | ಜಿ.ಎಸ್‌.ಟಿ ಇಳಿಕೆ: ಬಿಜೆಪಿ ವಿಜಯೋತ್ಸವ

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2025, 2:24 IST
Last Updated 23 ಸೆಪ್ಟೆಂಬರ್ 2025, 2:24 IST
ಹಿರೇಕೆರೂರ ಪಟ್ಟಣದ ಸರ್ವಜ್ಞ ವೃತ್ತದಲ್ಲಿ ಸೋಮವಾರ ಬಿಜೆಪಿ ವಿಜಯೋತ್ಸವ ಆಚರಿಸಿತು
ಹಿರೇಕೆರೂರ ಪಟ್ಟಣದ ಸರ್ವಜ್ಞ ವೃತ್ತದಲ್ಲಿ ಸೋಮವಾರ ಬಿಜೆಪಿ ವಿಜಯೋತ್ಸವ ಆಚರಿಸಿತು    

ಹಿರೇಕೆರೂರ: ಕೇಂದ್ರ ಸರ್ಕಾರವು ಜಿ.ಎಸ್‌.ಟಿ ಕಡಿತಗೊಳಿಸುವ ಮೂಲಕ ರೈತರಿಗೆ, ಬಡವರಿಗೆ ಹಾಗೂ ಮಧ್ಯಮ ವರ್ಗದವರಿಗೆ ನೆರವಾಗಿದೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಹೇಳಿದರು.

ಪಟ್ಟಣದ ಸರ್ವಜ್ಞ ವೃತ್ತದಲ್ಲಿ ಸೋಮವಾರ ತಾಲ್ಲೂಕಿನ ಬಿಜೆಪಿ ಮಂಡಲ ಆಯೋಜಿಸಿದ್ದ ವಿಜಯೋತ್ಸವ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.

ಜಾತಿ ಮತ್ತು ಹಿಂದೂ ಧರ್ಮವನ್ನು ಒಡೆಯಲು ರಾಜ್ಯದ ಸಿದ್ದರಾಮಯ್ಯನವರ ಸರ್ಕಾರ ಜಾತಿಗಣತಿ ಮಾಡುತ್ತಿದೆ. ‌ಇದರಿಂದ ಯಾರಿಗೂ ಉಪಯೋಗವಿಲ್ಲ ಎಂದು ಅವರು ಹೇಳಿದರು.

ADVERTISEMENT

ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ವಿಜಯೋತ್ಸವ ಕಾರ್ಯಕ್ರಮವನ್ನು ನಡೆಸಲಾಯಿತು.

ಬಿಜೆಪಿ ಮಂಡಲ ಅಧ್ಯಕ್ಷ ಸಂಜೀವಯ್ಯ ಕಬ್ಬಿಣಕಂತಿಮಠ , ಮಂಡಲ ಪ್ರಧಾನ ಕಾರ್ಯದರ್ಶಿ ನಿಂಗಾಚಾರ ಮಾಯಾಚಾರ , ನಿಕಟ ಪೂರ್ವ ಅಧ್ಯಕ್ಷ ಶಿವಕುಮಾರ ತಿಪ್ಪಶೆಟ್ಟಿ, ಜಿಲ್ಲಾ ಮಹಿಳಾ ಪ್ರಧಾನ ಕಾರ್ಯದರ್ಶಿ ಬಸಮ್ಮ ಅಬಲೂರ, ದುರ್ಗೇಶ ತಿರಕಪ್ಪನವರ, ರುದ್ರೇಶ ಬೇತೂರು, ಹರೀಶ ಕಲಾಲ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.