ADVERTISEMENT

ಪತಂಜಲಿ ಕೇಂದ್ರದಲ್ಲಿ ಗುರುಪೂರ್ಣಿಮೆ ಆಚರಣೆ

​ಪ್ರಜಾವಾಣಿ ವಾರ್ತೆ
Published 29 ಜುಲೈ 2021, 13:29 IST
Last Updated 29 ಜುಲೈ 2021, 13:29 IST
ಹಾವೇರಿ ಜಿಲ್ಲಾ ಮಹಿಳಾ ಪತಂಜಲಿ ಯೋಗ ಕೇಂದ್ರದಲ್ಲಿ ಗುರು ಪೂರ್ಣಿಮೆ ಕಾರ್ಯಕ್ರಮ ಆಚರಿಸಲಾಯಿತು 
ಹಾವೇರಿ ಜಿಲ್ಲಾ ಮಹಿಳಾ ಪತಂಜಲಿ ಯೋಗ ಕೇಂದ್ರದಲ್ಲಿ ಗುರು ಪೂರ್ಣಿಮೆ ಕಾರ್ಯಕ್ರಮ ಆಚರಿಸಲಾಯಿತು    

ಹಾವೇರಿ: ನಗರದ ಉದಯನಗರದ ಹಾವೇರಿ ಜಿಲ್ಲಾ ಮಹಿಳಾ ಪತಂಜಲಿ ಯೋಗ ಕೇಂದ್ರದ ವತಿಯಿಂದ ಗುರು ಪೂರ್ಣಿಮೆ ಕಾರ್ಯಕ್ರಮ ನಡೆಯಿತು.

ಹಾವೇರಿ ತಾಲ್ಲೂಕು ಪ್ರಭಾರಿ ಪುಷ್ಪಾ ಮೃ. ಸೊಲಬಗೌಡ್ರ ಅವರ ನೇತೃತ್ವದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.ಹಾವೇರಿಯ ಕೋವಿಡ್ ಕೇರ್ ಸೆಂಟರ್‌ನಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿದ ಜ್ಯೋತಿ ಜಂಬಗಿ ಹಾಗೂ ರೇಖಾ ರಾಮಾಳದ ಅವರನ್ನು ಉದಯನಗರದ ಗಣೇಶ ದೇವಸ್ಥಾನದಲ್ಲಿ ಸನ್ಮಾನಿಸಲಾಯಿತು.

ಉದಯನಗರದ ಯೋಗ ಶಿಕ್ಷಕಿ ಪುಷ್ಪಾ ಸೊಲಬಗೌಡ್ರ ಅವರಿಗೆ ಗುರುವಂದನೆ ಸಲ್ಲಿಸಲಾಯಿತು. ಅನುಪಮಾ ವಾಲಿಶೆಟ್ಟರ್, ದೀಪಾ ಹುಬ್ಬಳ್ಳಿ, ಪುಷ್ಪಾ ಎರೆಸೀಮಿ ಹಾಗೂ ಹಲವಾರು ಯೋಗ ಸಾಧಕರು ಭಾಗವಹಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.