ADVERTISEMENT

ಹಾವೇರಿ: ಚಿಕ್ಕೇರೂರು ಮಠಕ್ಕೆ ಗುರುಲಿಂಗ ಸ್ವಾಮೀಜಿ ಉತ್ತರಾಧಿಕಾರಿ

​ಪ್ರಜಾವಾಣಿ ವಾರ್ತೆ
Published 29 ಅಕ್ಟೋಬರ್ 2025, 3:16 IST
Last Updated 29 ಅಕ್ಟೋಬರ್ 2025, 3:16 IST
ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲ್ಲೂಕಿನ ಚಿಕ್ಕೇರೂರು ವಿರಕ್ತಮಠದಲ್ಲಿ ಇತ್ತೀಚೆಗೆ ಜರುಗಿದ ಸರಳ ಕಾರ್ಯಕ್ರಮದಲ್ಲಿ ಮಠದ ಪೀಠಾಧಿಪತಿ ಚಂದ್ರಶೇಖರ ಸ್ವಾಮೀಜಿಯವರು ಗುರುಲಿಂಗ ಸ್ವಾಮೀಜಿ ಅವರಿಗೆ ಉತ್ತರಾಧಿಕಾರದ ಪತ್ರ ಹಸ್ತಾಂತರಿಸಿದರು 
ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲ್ಲೂಕಿನ ಚಿಕ್ಕೇರೂರು ವಿರಕ್ತಮಠದಲ್ಲಿ ಇತ್ತೀಚೆಗೆ ಜರುಗಿದ ಸರಳ ಕಾರ್ಯಕ್ರಮದಲ್ಲಿ ಮಠದ ಪೀಠಾಧಿಪತಿ ಚಂದ್ರಶೇಖರ ಸ್ವಾಮೀಜಿಯವರು ಗುರುಲಿಂಗ ಸ್ವಾಮೀಜಿ ಅವರಿಗೆ ಉತ್ತರಾಧಿಕಾರದ ಪತ್ರ ಹಸ್ತಾಂತರಿಸಿದರು    

ಹಾವೇರಿ: ಜಿಲ್ಲೆಯ ಹಿರೇಕೆರೂರು ತಾಲ್ಲೂಕಿನ ಚಿಕ್ಕೇರೂರು ವಿರಕ್ತಮಠಕ್ಕೆ ಹಾವೇರಿ ತಾಲ್ಲೂಕಿನ ಅಗಡಿ ಗ್ರಾಮದ ಅಕ್ಕಿಮಠದ ಗುರುಲಿಂಗ ಸ್ವಾಮೀಜಿ ಅವರನ್ನು ಉತ್ತರಾಧಿಕಾರಿಯನ್ನಾಗಿ ಮಾಡಲಾಗಿದೆ.

ಚಿಕ್ಕೇರೂರು ವಿರಕ್ತಮಠದಲ್ಲಿ ಇತ್ತೀಚೆಗೆ ಜರುಗಿದ ಸರಳ ಕಾರ್ಯಕ್ರಮದಲ್ಲಿ ಮಠದ ಪೀಠಾಧಿಪತಿ ಚಂದ್ರಶೇಖರ ಸ್ವಾಮೀಜಿಯವರು ಗುರುಲಿಂಗ ಸ್ವಾಮೀಜಿ ಅವರಿಗೆ ಉತ್ತರಾಧಿಕಾರದ ಪತ್ರ ಹಸ್ತಾಂತರಿಸಿದರು.

ನಂತರ ಮಾತನಾಡಿದ ಚಂದ್ರಶೇಖರ ಸ್ವಾಮೀಜಿ, ‘ಗುರುಲಿಂಗ ಸ್ವಾಮೀಜಿ ಅವರಲ್ಲಿ ಕಾರ್ಯಕ್ಷಮತೆ, ಸಂಘಟನಾ ಶಕ್ತಿ, ಸಮಾಜಮುಖಿ ಸೇವಾಕಾರ್ಯಗಳು ಹಾಗೂ ಅಮೋಘ ಪ್ರವಚನ ಪಾಂಡಿತ್ಯವಿದೆ. ಚಿಕ್ಕೇರೂರು ಮಠಕ್ಕೆ ಸೂಕ್ತ ಉತ್ತರಾಧಿಕಾರಿಯಾಗಿ ಮಠದ ಸೇವಾ ಕಾರ್ಯಗಳನ್ನು ಮುಂದುವರಿಸಿಕೊಂಡು ಹೋಗುವ ಸಾಮರ್ಥ್ಯವೂ ಅವರಲ್ಲಿದೆ. ಹೀಗಾಗಿ, ಅವರನ್ನು ಉತ್ತರಾಧಿಕಾರಿಯನ್ನಾಗಿ ನೇಮಿಸಲಾಗಿದೆ’ ಎಂದು ಹೇಳಿದರು.

ADVERTISEMENT

ಹಿರೇಮಾಗಡಿಯ ಶಿವಮೂರ್ತಿ ಮುರುಘರಾಜೇಂದ್ರ ಸ್ವಾಮೀಜಿ, ತಿಪ್ಪಾಯಿಕೊಪ್ಪದ ಮಹಾಂತೇಶ ಸ್ವಾಮೀಜಿ ಹಾಗೂ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.