ಹಾವೇರಿ: ಜಿಲ್ಲೆಯ ಹಾನಗಲ್ ಹಳೇ ಬಸ್ ನಿಲ್ದಾಣ ಬಳಿಯ ಕ್ವಾಟಿಗೇರಿ ಓಣಿಯ ಮನೆಯೊಂದರ ಬಾಗಿಲು ಮೀಟಿ ಮುರಿದು ಕಳ್ಳತನ ಮಾಡಲಾಗಿದ್ದು, ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘ಅ. 15ರಿಂದ ಅ. 17ರ ಅವಧಿಯಲ್ಲಿ ಮನೆಯಲ್ಲಿ ಯಾರೋ ಇಲ್ಲದ ಸಂದರ್ಭದಲ್ಲಿ ಕಳ್ಳತನ ನಡೆದಿರುವ ಬಗ್ಗೆ ಮಾಲೀಕ ಅಬ್ರಾರಖಾನ್ ಮಕ್ಬುಲಖಾನ್ ಮಿಠಾಯಿಗಾರ ಅವರು ದೂರು ನೀಡಿದ್ದಾರೆ. ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಹಾನಗಲ್ ಪೊಲೀಸರು ಹೇಳಿದರು.
‘ಮನೆಯ ಹಿಂದಿನ ಬಾಗಿಲನ್ನು ಯಾವುದೋ ಆಯಧದಿಂದ ಮೀಟಿ ಮುರಿದು ಕಳ್ಳರು ಒಳನುಗ್ಗಿದ್ದಾರೆ. ಮನೆಯಲ್ಲಿದ್ದ ₹ 4.76 ಲಕ್ಷ ಮೌಲ್ಯದ ಚಿನ್ನಾಭರಣವನ್ನು ಕದ್ದೊಯ್ದಿದ್ದಾರೆ. ಮನೆಯಲ್ಲಿ ಯಾರೋ ಇಲ್ಲದ್ದನ್ನು ನೋಡಿಯೇ ಆರೋಪಿಗಳು ಕೃತ್ಯ ಎಸಗಿದ್ದಾರೆ’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.