ADVERTISEMENT

ಹಾನಗಲ್: ಮತ ಎಣಿಕೆ ಕೇಂದ್ರದಲ್ಲಿ ಮೊಬೈಲ್‌ ನಿಷೇಧ

​ಪ್ರಜಾವಾಣಿ ವಾರ್ತೆ
Published 2 ನವೆಂಬರ್ 2021, 3:18 IST
Last Updated 2 ನವೆಂಬರ್ 2021, 3:18 IST
   

ಹಾನಗಲ್: ಉಪಚುನಾವಣೆ ಮತ ಎಣಿಕೆ ಕೇಂದ್ರದಲ್ಲಿ ಮೊಬೈಲ್ ದೂರವಾಣಿಗಳು, ಎಲೆ ಅಡಿಕೆ, ಗುಟ್ಕಾ, ಬೀಡಿ-ಸಿಗರೇಟ್‌, ಪಾನ್ ಮಸಾಲಾ, ತಿಂಡಿ ತಿನಿಸುಗಳು, ಕುಡಿಯುವ ನೀರು ಮತ್ತು ಶಸ್ತ್ರಾಸ್ತ್ರ ಮುಂತಾದವುಗಳಿಗೆ ಪ್ರವೇಶವಿಲ್ಲ. ಚಾಕು, ಕತ್ತರಿ, ಕಡ್ಡಿಪೆಟ್ಟಿಗೆ ಮತ್ತು ಅಗ್ನಿ ಅವಘಡಕ್ಕೆ ಆಹ್ವಾನ ನೀಡುವ ವಸ್ತುಗಳನ್ನು ನಿಷೇಧಿಸಲಾಗಿದೆ.

ಜಿಲ್ಲೆಯಾದ್ಯಂತ 144 ಸೆಕ್ಷನ್‌ ಜಾರಿ; ವಿಜಯೋತ್ಸವ ನಿಷೇಧ

ಈಗಾಗಲೇ ಜಿಲ್ಲೆಯಾದ್ಯಂತ 144 ಕಲಂ ಜಾರಿಗೊಳಿಸಲಾಗಿದೆ. ಮದ್ಯ ಮಾರಾಟ ನಿಷೇಧಿಸಲಾಗಿದೆ. ಹಾನಗಲ್, ಹಾವೇರಿ, ದೇವಗಿರಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ವಿಶೇಷ ಪೊಲೀಸ್ ಭದ್ರತೆ ಹಾಕಲಾಗಿದೆ. ವಿಜಯೋತ್ಸವ, ಮೆರವಣಿಗೆ ನಿಷೇಧಿಸಲಾಗಿದೆ. ಜಿಲ್ಲೆಯಾದ್ಯಂತ ನ.5ರವರೆಗೂ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಪ್ರಮಾಣ ಪತ್ರ ಪಡೆಯಲು ಅಭ್ಯಥಿ೯ ಜೊತೆ ಇಬ್ಬರಿಗೆ ಮಾತ್ರ ಅವಕಾಶ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹನುಮಂತರಾಯ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.