ರಾಣೆಬೆನ್ನೂರು: ಹರಿಯಾಣ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸತತ ಮೂರನೇ ಬಾರಿಗೆ ಹ್ಯಾಟ್ರಿಕ್ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಮಂಗಳವಾರ ನಗರದಲ್ಲಿ ಬಿಜೆಪಿ ವತಿಯಿಂದ ಸಿಹಿ ಹಂಚಿ, ಸಿಡಿಮದ್ದು ಸಿಡಿಸಿ ವಿಜಯೋತ್ಸವ ಆಚರಿಸಿದರು.
ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಅರುಣಕುಮಾರ ಪೂಜಾರ, ಡಾ.ಬಸವರಾಜ ಕೆಲಗಾರ, ಕೆ.ಶಿವಲಿಂಗಪ್ಪ, ಮಂಜುನಾಥ ಓಲೇಕಾರ, ದೀಪಕ ಹರಪನಹಳ್ಳಿ, ಮಂಜುಳಾ ಹತ್ತಿ, ಭಾರತಿ ಜಂಬಗಿ, ಶಿವಕುಮಾರ್ ಹಾರಕನಾಳ ಮುಂತಾದವರು ಇದ್ದರು.
ಹರಿಯಾಣ ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸತತ ಮೂರನೇ ಬಾರಿಗೆ ಗೆಲುವು ಸಾಧಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವ, ಪಕ್ಷದ ಅಭಿವೃದ್ಧಿ ರಾಜಕಾರಣ, ಉತ್ತಮ ಆಡಳಿತ ಹಾಗೂ ವಿಕಸಿತ ಭಾರತದ ಸಂಕಲ್ಪಕ್ಕೆ ಮತ್ತೊಮ್ಮೆ ಸುಸ್ಪಷ್ಟ ಜನಾದೇಶ ದೊರಕಿದೆ. ಜಮ್ಮು ಕಾಶ್ಮೀರದಲ್ಲಿ ಗಣನೀಯ ಸ್ಥಾನ ಪಡೆದು ಪ್ರಬಲ ವಿರೋಧ ಪಕ್ಷವಾಗಿ ಹೊರಹೊಮ್ಮಿದ್ದೇವೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.