ADVERTISEMENT

ಹಾವೇರಿ | ಅಂಗನವಾಡಿ; 238 ಹುದ್ದೆಗಳಿಗೆ ಅರ್ಜಿ

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2025, 6:26 IST
Last Updated 22 ಅಕ್ಟೋಬರ್ 2025, 6:26 IST
   

ಹಾವೇರಿ: ಜಿಲ್ಲೆಯ ಅಂಗನವಾಡಿಗಳಲ್ಲಿ ಖಾಲಿ ಇರುವ 61 ಕಾರ್ಯಕರ್ತೆ ಹಾಗೂ 177 ಸಹಾಯಕಿಯರ ಹುದ್ದೆಗಳ ಭರ್ತಿಗಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್ 17 ಕೊನೆ ದಿನವಾಗಿದೆ.

ಬ್ಯಾಡಗಿ ತಾಲ್ಲೂಕಿನಲ್ಲಿ 3, ಹಾನಗಲ್ 13, ಹಾವೇರಿ 5, ಹಿರೇಕೆರೂರು 12, ರಾಣೆಬೆನ್ನೂರು 20, ಸವಣೂರು 4 ಹಾಗೂ ಶಿಗ್ಗಾವಿ ತಾಲ್ಲೂಕಿನಲ್ಲಿ 4 ಕಾರ್ಯಕರ್ತೆ ಹುದ್ದೆಗಳು ಖಾಲಿಯಿವೆ. ಬ್ಯಾಡಗಿ ತಾಲ್ಲೂಕಿನಲ್ಲಿ 17, ಹಾನಗಲ್ 21, ಹಾವೇರಿ 29, ಹಿರೇಕೆರೂರು 27, ರಾಣೆಬೆನ್ನೂರು 34, ಸವಣೂರು 23 ಹಾಗೂ ಶಿಗ್ಗಾವಿ ತಾಲ್ಲೂಕಿನಲ್ಲಿ 26 ಸಹಾಯಕಿಯರ ಹುದ್ದೆಗಳಿಗೆ ಅರ್ಜ ಆಹ್ವಾನಿಸಲಾಗಿದೆ.

ADVERTISEMENT

‘ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ದ್ವಿತೀಯ ಪಿಯುಸಿ ಪೂರ್ಣಗೊಳಿಸಿರಬೇಕು. ಸಹಾಯಕಿಯರ ಹುದ್ದೆಗೆ ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾಗಿರಬೇಕು. ಕನಿಷ್ಠ 19 ವರ್ಷ ಹಾಗೂ ಗರಿಷ್ಠ 35 ವರ್ಷ ವಯಸ್ಸಿನವರಾಗಿರಬೇಕು. ಮಹಿಳೆಯರು ಹಾಗೂ ಲಿಂಗತ್ವ ಅಲ್ಪಸಂಖ್ಯಾತರು ಜಾಲತಾಣದ ಮೂಲಕ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಆಯಾ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ಅಥವಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಚೇರಿ ಸಂಪರ್ಕಿಸಬಹುದು’ ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.